Mysore
19
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ಪುರಾತನ ಆರೋಗ್ಯ ಕ್ರಮವೇ ಯೋಗ : ಸಚಿವ ಮಹದೇವಪ್ಪ

ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು.

ಇಂದು ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮೈಸೂರು ಆಯುಷ್ ಇಲಾಖೆಯ ವತಿಯಿಂದ ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025 ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ಎಂಬುದು ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸಗಳಲ್ಲಿ ಒಂದಾಗಿರುವುದರಿಂದ ದೈಹಿಕ ಮತ್ತು ಭಾವನೆಗಳ ಸಮತೋಲನ ನಿಯಂತ್ರಣಗಳ ಬಗ್ಗೆ ಜನ ಜಾಗೃತಿ ಮಾಡಿಕೊಟ್ಟಿದೆ. ಪ್ರತಿ ನಿತ್ಯ ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ 4 ನಿಮಿಷಗಳ ಕಾಲ ಚಲನಕ್ರಿಯೆ, 25 ನಿಮಿಷಗಳ ಕಾಲ ಯೋಗಾಸನ, 14 ನಿಮಿಷಗಳ ಕಾಲ ಪ್ರಾಣಾಯಾಮ, ಧ್ಯಾನ ಮತ್ತು ಸಂಕಲ್ಪ ಮಾಡಲಾಯಿತು. 15 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು, ವಿದ್ಯಾರ್ಥಿಗಳು ಈ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕೃಷ್ಣರಾಜ ವಿಧಾನಸಭೆ ಕ್ಷೇತ್ರದ ಶಾಸಕರಾದ ಟಿ. ಎಸ್. ಶ್ರೀವತ್ಸ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ. ಶಿವರಾಜು, ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ರೇಣುಕಾ ದೇವಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:
error: Content is protected !!