ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು.
ಇಂದು ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮೈಸೂರು ಆಯುಷ್ ಇಲಾಖೆಯ ವತಿಯಿಂದ ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025 ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯೋಗ ಎಂಬುದು ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸಗಳಲ್ಲಿ ಒಂದಾಗಿರುವುದರಿಂದ ದೈಹಿಕ ಮತ್ತು ಭಾವನೆಗಳ ಸಮತೋಲನ ನಿಯಂತ್ರಣಗಳ ಬಗ್ಗೆ ಜನ ಜಾಗೃತಿ ಮಾಡಿಕೊಟ್ಟಿದೆ. ಪ್ರತಿ ನಿತ್ಯ ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ 4 ನಿಮಿಷಗಳ ಕಾಲ ಚಲನಕ್ರಿಯೆ, 25 ನಿಮಿಷಗಳ ಕಾಲ ಯೋಗಾಸನ, 14 ನಿಮಿಷಗಳ ಕಾಲ ಪ್ರಾಣಾಯಾಮ, ಧ್ಯಾನ ಮತ್ತು ಸಂಕಲ್ಪ ಮಾಡಲಾಯಿತು. 15 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು, ವಿದ್ಯಾರ್ಥಿಗಳು ಈ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕೃಷ್ಣರಾಜ ವಿಧಾನಸಭೆ ಕ್ಷೇತ್ರದ ಶಾಸಕರಾದ ಟಿ. ಎಸ್. ಶ್ರೀವತ್ಸ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ. ಶಿವರಾಜು, ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ರೇಣುಕಾ ದೇವಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…