ಮೈಸೂರು

ಯೋಗ ಜೀವನದ ಅವಿಭಾಜ್ಯ ಅಂಗವಾಗಬೇಕು : ಡಾ.ಪುಷ್ಪ

ಮೈಸೂರು: ಯೋಗವನ್ನು ಕೇವಲ ಒಂದು ದಿನ ಮಾತ್ರ ಮಾಡಿದರೆ ಸಾಲದು, ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬುದು ಆಯುಷ್ಯ ಇಲಾಖೆಯ ಮೂಲ ಉದ್ದೇಶ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ತಿಳಿಸಿದರು.

ಅವರು ಇಂದು(ಜೂ.15) ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಎಸ್ಪಿವೈಎಸ್ಎಸ್ ಮೈಸೂರು ಇವರ ಸಹಯೋಗದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ 20 ರವರೆಗೆ ಯೋಗೋತ್ಸವ ಕಾರ್ಯಕ್ರಮವನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಯೋಗದ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳಲ್ಲಿ ಯೋಗ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇಂದು ಎಸ್ಪಿವೈಎಸ್ಎಸ್ ವತಿಯಿಂದ ಯೋಗ ತರಬೇತಿಯನ್ನು ಪಡೆದು ಜೂನ್ 21ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪಾಲ್ಗೊಂಡು ಯೋಗ ಮಾಡಲಿದ್ದಾರೆ. ಯೋಗದ ಅರಿವನ್ನು ಮೂಡಿಸುವ ಹಿನ್ನೆಲೆಯಲ್ಲಿ ಇಂದು ಯೋಗೋತ್ಸವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದೇವೆ ಎಂದು ಹೇಳಿದರು.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ವಿಶ್ವನಾಥ್  ಮಾತನಾಡಿ, ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಂದು ಪೂರ್ವಭಾವಿ ಯೋಗಭ್ಯಾಸವು ಬಹಳ ಯಶಸ್ವಿಯಾಗಿ ನಡೆದಿದೆ. ಜೂನ್ 21 ಮಹತ್ವ ದಿನ. ಭಾರತದಿಂದ ಆರಂಭವಾದ ಯೋಗವನ್ನು ಇಂದು ಪ್ರಪಂಚಾದ್ಯಂತ ಯೋಗ ದಿನವನ್ನು ಆಚರಣೆ ಮಾಡುತ್ತಿದ್ದಾರೆ. ಯೋಗದಿಂದ ಬಹಳ ಉಪಯೋಗವಿದೆ ಹಾಗಾಗಿ ಎಲ್ಲರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಕೆ ಬಸವರಾಜು, ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಜಮೀಲ್, ನಿವೃತ್ತ ಕೆಎಎಸ್ ಅಧಿಕಾರಿ ರವಿಕುಮಾರ್, ಡಾ.ಯತೀಶ್ ಸತ್ಯನಾರಾಯಣ್ ಸೇರಿದಂತೆ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಯೋಗ ತರಬೇತಿದಾರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

6 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

43 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

52 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago