ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.
ಪ್ರೀತಿ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ನಡೆಸಿದ್ದರು. ಯುವತಿಯ ಕುಟುಂಬದ ಜಯಕುಮಾರ್, ಮಂಜು ಸೇರಿದಂತೆ ಐವರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನವಾಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬನ್ನೂರು ಪೊಲೀಸ್ ಠಾಣೆಗೆ ನಾಗೇಂದ್ರ ಪೋಷಕರು ದೂರು ನೀಡಿದ್ದು, ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…