ಮೈಸೂರು

ಯುವ ಮತದಾರರು ತಪ್ಪದೇ ಮತ ಚಲಾಯಿಸಿ : ಕುಮುದಾ ಶರತ್ !

ಮೈಸೂರು : ಯುವ ಮತದಾರರ ಮುಕ್ತ ಹಾಗೂ ನ್ಯಾಯೋಚಿತವಾದ ಚುನಾವಣೆಯನ್ನು ಬೆಂಬಲಿಸಬೇಕು. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಕುಮುದಾ ಶರತ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ – 2024 ರ ಹಿನ್ನೆಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಯುವ ಮತದಾರರ ಮತದಾನ ಜಾಗೃತಿ ಹಾಗೂ ಹಸ್ತಾಕ್ಷರ ಸಂಗ್ರಹ ಅಭಿಯಾನವನ್ನು ಉದ್ಘಾಟಿಸಿದರು.

ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಧರಣೇಶ್ ಎಸ್.ಪಿ ಅವರು ಮಾತನಾಡಿ, ಯಾವುದೇ ಆಸೆ ಆಮಿಷಗಳಿಗೆ ಯುವ ಮತದಾರರ ಒಳಗಾಗದೆ ಪ್ರಜಾ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಪ್ಪದೇ ಮತದಾನ ಮಾಡಬೇಕು. ಜೊತೆಗೆ ತಮ್ಮ ಕುಟುಂಬದವರು, ನೆರೆಹೊರೆಯವರು, ಸಂಬಂಧಿಕರು ಹಾಗೂ ಮತದಾನದ ಬಗ್ಗೆ ಅಸಡ್ಡೆ ತೋರುವವರನ್ನು ಪ್ರೇರೇಪಿಸಿ ಮತಗಟ್ಟೆಗೆ ಕರೆದುಕೊಂಡು ಹೋಗಿ ಮತದಾನ ಮಾಡಿಸಬೇಕು.

ಮತದಾನ ಮಾಡುವ ಪ್ರತಿಯೊಬ್ಬ ಯುವಕರಿಗೆ ಮೊದಲು ಮತದಾನ ಮಾಡುವ ದಿನದ ಬಗ್ಗೆ ಅರಿವು ಇರಬೇಕು. ಜೊತೆಗೆ VHA ( ವೋಟರ್ ಹೆಲ್ಫ್ ಲೈನ್ ಆಪ್) ನಲ್ಲಿ ನಿಮ್ಮ ಮತಗಟ್ಟೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು ಎಂದು ತಿಳಿಸಿದರು.

ವಿದ್ಯಾರ್ಥಿಗಳೇ ಭಾರತದ ಮುಂದಿನ ಭವಿಷ್ಯದ ಪ್ರಜೆಗಳು” “ವಿದ್ಯಾರ್ಥಿಗಳ ನಡೆ – ಮತಗಟ್ಟೆಯ ಕಡೆ” ಇರಬೇಕು. ಆದ್ದರಿಂದ ಎಲ್ಲಾರೂ ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಂವಿಧಾನಿಕ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಬೇಕು ಕಿವಿಮಾತು ಹೇಳಿದರು.

ಮೊದಲ ಬಾರಿಗೆ ಮತದಾನ ಮಾಡುವ ವಿದ್ಯಾರ್ಥಿನಿ ಶಿಲ್ಪಾ ಅವರು, ಮೊದಲ ಬಾರಿಗೆ ಮತದಾನ ಮಾಡಲು ತುಂಬಾ ಉತ್ಸುಕಳಾಗಿದ್ದೇನೆ ಹಾಗೂ ಸಂತೋಷವಾಗುತ್ತಿದೆ.

ಹಿಂದೆ ಹೆಣ್ಣು ಮಕ್ಕಳಿಗೆ ಮತದಾನ ಮಾಡುವ ಹಕ್ಕು ಇರಲಿಲ್ಲ, ಕೇವಲ ಶ್ರೀಮಂತರು, ಪದವಿಧರರಿಗೆ ಮಾತ್ರ ಇತ್ತು, ಡಾ.ಬಿ.ಆರ್.ಅಂಬೇಡ್ಕರ್ ಹೆಣ್ಣು ಮಕ್ಕಳಿಗೂ ಮತದಾನದ ಹಕ್ಕನ್ನು ಕೊಡಿಸಿದ್ದಾರೆ ಇದರಿಂದ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯವನ್ನು ಹಂಚಿಕೊಂಡರು.

ಇದೇ ವೇಳೆ ಯುವ ಮತದಾರರಿಂದ ಹಸ್ತಾಕ್ಷರ ಸಂಗ್ರಹ ಹಾಗೂ ಮಾನವ ಸರಪಳಿ ನಿರ್ಮಿಸಿ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲಾಯಿತು.

ಈ ವೇಳೆ ತಾಲ್ಲೂಕು ಯೋಜನಾಧಿಕಾರಿಗಳಾದ ಕೆ.ರಂಗಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಅರುಣ್, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

5 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

6 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

7 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

7 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

8 hours ago