Mysore
15
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಯುವ ಬ್ರಿಗೇಡ್​ ಕಾರ್ಯಕರ್ತ ವೇಣು ಕೊಲೆ ಪ್ರಕರಣ : ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಎಫ್​ಐಆರ್

ಮೈಸೂರು : ಯುವ ಬ್ರಿಗೇಡ್​ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರವಿಕುಮಾರ್‌ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 504, 505(1),(B)ರಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

rajee_hindu ಇನ್ಸ್​ಸ್ಟಾಗ್ರಾಂ ಐಡಿಯಿಂದ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್‌ ಹಾಕಲಾಗಿತ್ತು. ಈ ಬಗ್ಗೆ ರವಿಕುಮಾರ್‌ ಎಂಬುವವರು ಟಿ.ನರಸೀಪುರ ಪೊಲೀಸ್​ ಠಾಣೆಗೆ ದೂರು ನೀಡಿ ಪೋಸ್ಟ್ ಹಾಕಿದವರ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದರಂತೆ ಇದೀಗ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ​rajee_hindu ಇನ್ಸ್​ಸ್ಟಾಗ್ರಾಂ ಐಡಿ ಯಾರದ್ದು? ಎಂದು ತನಿಖೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!