ಮೈಸೂರು : ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರವಿಕುಮಾರ್ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 504, 505(1),(B)ರಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
rajee_hindu ಇನ್ಸ್ಸ್ಟಾಗ್ರಾಂ ಐಡಿಯಿಂದ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್ ಹಾಕಲಾಗಿತ್ತು. ಈ ಬಗ್ಗೆ ರವಿಕುಮಾರ್ ಎಂಬುವವರು ಟಿ.ನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿ ಪೋಸ್ಟ್ ಹಾಕಿದವರ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದರಂತೆ ಇದೀಗ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, rajee_hindu ಇನ್ಸ್ಸ್ಟಾಗ್ರಾಂ ಐಡಿ ಯಾರದ್ದು? ಎಂದು ತನಿಖೆ ನಡೆಸಿದ್ದಾರೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…