ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪೂಜೆಗಳು ಮುಗಿದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ ನಡೆಯಿತು.
ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ನಾಲ್ಕು ಶುಕ್ರವಾರಗಳು ಹಾಗೂ ಅಮ್ಮನವರ ವರ್ಧಂತಿ ಮಹೋತ್ಸವದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.
ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬಂದಿದ್ದ ಭಕ್ತರು ಪ್ಲಾಸ್ಟಿಕ್‌ಗಳನ್ನು ಎಸೆದು ಗಲೀಜು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಬೆಟ್ಟಕ್ಕೆ ಆಗಮಿಸಿ ಸ್ವಚ್ಛತಾ ಕಾರ್ಯ ನೆರವೇರಿಸಿದರು. ಬೆಟ್ಟದಲ್ಲಿ ಪ್ಲಾಸ್ಟಿಕ್ ಸೇರಿದಂತೆ ಮದ್ಯದ ಬಾಟೆಲ್‌ಗಳನ್ನು ಕಂಡು ದಂಗಾದ ಕಾರ್ಯಕರ್ತರು, ಎಲ್ಲವನ್ನು ಶುಚಿಗೊಳಿಸಿದರು





