ಮೈಸೂರು: ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮಾನಸಿಕವಾಗಿ ನೊಂದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗೋಕುಲಂ ಬಡಾವಣೆಯಲ್ಲಿ ಜರುಗಿದ್ದು, ಈ ಸಂಬಂಧ ವಿವಿಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.
ಅರ್ಚಕ ಮುರಳೀಧರ್ ಮಗ ಮಧುಕರ್(22) ಎಂಬಾತ ಮೃತ ದುರ್ದೈವಿ. ಮುರಳೀಧರ್ ಪತ್ನಿ ವಿಚ್ಛೇಧನ ಪಡೆದ ಕಾರಣ ಮಗ ಮಧುಕರ್ ತಂದೆಯ ಜೊತೆ ವಾಸವಾಗಿದ್ದರು.
ಕೆಲದಿನಗಳಿಂದ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮೃತನು ದಿನರಾತ್ರಿ ಭಯದ ಭೀತಿಯಲ್ಲಿದ್ದನಂತೆ. ಡಿಪ್ಲೋಮಾದಲ್ಲಿ ಅನುತ್ತೀರ್ಣಗೊಂಡ ಮಧುಕರ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವನು ಸಂಜೆ ಮನೆಗೆ ಬಂದಾಗ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿದ್ದನು. ವಾಮಾಚಾರದ ಭೀತಿಯಿಂದ ಮಧುಕರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ತಂದೆ ಮುರಳೀಧರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…