ಮೈಸೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಅಲ್ಲದೇ ಪಾಕಿಸ್ತಾನ, ಅಲ್ಲಾಹು ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಮೈಸೂರಿನ ರೋಹಿತ್ ಹಲ್ಲೆಗೊಳಗಾದ ಯುವಕ. ನಗರದ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದ್ದು, ಈ ಬಗ್ಗೆ ರೋಹಿತ್ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರೋಹಿತ್ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ನರೇಂದ್ರ ಮೋದಿ ಹಾಡು ಬರೆದಿದ್ದೀಯಾ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ರೋಹಿತ್ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬಂದು ಘಟನೆ ಸಂಬಂಧ ದೂರು ನೀಡಿದ್ದು, ಬಳಿಕ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಘಟನೆ ಸಂಬಂಧ ರೋಹಿತ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…