ಮೈಸೂರು

ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ: ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ!

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಅಲ್ಲದೇ ಪಾಕಿಸ್ತಾನ, ಅಲ್ಲಾಹು ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಮೈಸೂರಿನ ರೋಹಿತ್‌ ಹಲ್ಲೆಗೊಳಗಾದ ಯುವಕ. ನಗರದ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದ್ದು, ಈ ಬಗ್ಗೆ ರೋಹಿತ್‌ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರೋಹಿತ್‌ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ನರೇಂದ್ರ ಮೋದಿ ಹಾಡು ಬರೆದಿದ್ದೀಯಾ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ರೋಹಿತ್ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬಂದು ಘಟನೆ ಸಂಬಂಧ ದೂರು ನೀಡಿದ್ದು, ಬಳಿಕ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಘಟನೆ ಸಂಬಂಧ ರೋಹಿತ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago