Categories: ಮೈಸೂರು

ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು: ಶಿಲ್ಪನಾಗ್‌

ಮೈಸೂರು: ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು-ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.

ಸೋಮವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಮರ್ಧತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಡೆಯುತ್ತಿರುವ 30 ದಿನಗಳ ಕೆಎಎಸ್ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡಲು ನಿಷ್ಠೆ ಇರಬೇಕು. ಅಧಿಕಾರಿಗಳಾದ ಮೇಲೆ ನಿಮ್ಮ ನಿಲುವು ಬದಲಾಗಬಾರದು. ರಾಷ್ಟ್ರೀಯ ಐಕ್ಯತೆ, ಸಮಾನತೆ, ಸಾಮಾಜಿಕ ಕಳಕಳಿಯಲ್ಲಿ ತೊಡಗಿಸಿಕೊಳ್ಳಬೇಕು. ಜನರು ಅಧಿಕಾರಿಗಳ ಮೇಲೆ ವಿಶ್ವಾಸ ಇಟ್ಟಿರುತ್ತಾರೆ. ಜೊತೆಗೆ ನಮಗೆ ಸಹಾಯ ಮಾಡಿದವರಿಗೆ ಕೃತಜ್ಞತೆಯಿಂದ ಇರಬೇಕು ಎಂದರು.

ನಾವೆಲ್ಲರೂ ಕೂಡ ವ್ಯವಸ್ಥೆಯನ್ನು ಟೀಕಿಸುತ್ತಿದ್ದೇವೆ, ಸ್ಥಳೀಯ ಸಂಸ್ಥೆಗಳನ್ನು ನಿಂದಿಸುತ್ತೇವೆ, ರಸ್ತೆ ಸರಿಯಿಲ್ಲವೆಂದರೆ ಸರ್ಕಾರವನ್ನು ಟೀಕಿಸುತ್ತೇವೆ. ಆದರೆ ನಾವು ವ್ಯವಸ್ಥೆಯೊಳಗೆ ಬಂದಾಗ ನಮ್ಮ ಜವಾಬ್ದಾರಿಯನ್ನು ಮರೆಯಬಾರದು ಎಂದರು.

ಉನ್ನತ ಶಿಕ್ಷಣ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿದೆ. ಪದವಿ ಪಡೆದವರೆಲ್ಲ ಯುಪಿಎಸ್ಸಿ ಕೆಪಿಎಸ್ಸಿ ಪರೀಕ್ಷೆ ಬರೆಯಬಹುದು. ನಿಮ್ಮಂತ ಯುವ ಸಮೂಹ ಸರ್ಕಾರಿ ಕೆಲಸಕ್ಕೆ ಸೇರಬೇಕು ಎಂದ ಅವರು ಪರೀಕ್ಷೆ ಬಗ್ಗೆ ಭಯಬೇಡ. ಸಿದ್ಧತೆ ನಿರಂತರ ಇರಲಿ. ಪ್ರತಿದಿನ ಪತ್ರಿಕೆ ಓದಿ. ಪರೀಕ್ಷಾ ವೇಳೆಯಲ್ಲಿ ಸಮಯ ನಿರ್ವಹಣೆಯ ಬಗ್ಗೆ ಗಮನ ಹರಿಸಿ ಎಂದು ತಿಳಿಸಿದರು.

ಸಮಾಜಕ್ಕೆ ಸೇವೆ ಮಾಡಬೇಕು ಅಂತ ಬಂದಿದ್ದೀರಿ. ಸೇವೆ ಮಾಡಿ. ಸಮಾಜಕ್ಕೆ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗಲ್ಲ. ಕಷ್ಟಪಟ್ಟವರಿಗೆ ಮಾತ್ರ ಸಮಾಜ ಸೇವಾ ಮಾಡುವ ಅವಕಾಶ ಸಿಗುವುದು. ಇಂದಿನ ಪರೀಕ್ಷಾರ್ಥಿಗಳು ಒಂದು ಪರೀಕ್ಷೆ ಬರೆದ ಕೂಡಲೇ. ಯಶಸ್ಸು ಬೇಕೆಂದು ಅಪೇಕ್ಷಿಸುತ್ತಾರೆ. ಇಲ್ಲವಾದರೆ ಅಲ್ಲಿಗೆ ಬಿಟ್ಟುಬಿಡುತ್ತಾರೆ. ಪರೀಕ್ಷೆ ಬರೆದ ಮೊದಲೆ ವರ್ಷದಲ್ಲಿ ಎಲ್ಲವೂ ನಿರ್ಧಾರವಾಗುವುದಿಲ್ಲ. ಆಗಾಂತ ಐದು ಹತ್ತು ವರ್ಷವನ್ನೂ ತೆಗೆದುಕೊಳ್ಳಬಾರದು. ನಿಮ್ಮ ಆತ್ಮಗೌರವ ಪರೀಕ್ಷೆಗಳಿಂದ ನಿರ್ಧಾರವಾಗಲ್ಲ ಎಂಬುದನ್ನು ಮೊದಲು ತಿಳಿಯಿರಿ ಎಂದು ಸಲಹೆ ನೀಡಿದರು.

ಪ್ರತಿದಿನ ಓದುತ್ತಾ ಹೋದಂತೆ ನಿಮ್ಮನ್ನು ನೀವು ಭೌದ್ದಿಕವಾಗಿ ರೂಪಿಸಿಕೊಳ್ಳಬೇಕು. ನಿಮ್ಮ ಶಕ್ತಿ ಮತ್ತು ದೌರ್ಬಲ್ಯವನ್ನ ಅರಿಯಿರಿ ಎಂದರು. ಬಳಿಕ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳ ಬಗ್ಗೆ ಅಭ್ರ‍್ಥಿಗಳಿಗಿದ್ದ ಗೊಂದಲ ನಿವಾರಿಸಿ, ಕೆಲವು ಸಲಹೆ ನೀಡಿದರು.

ಮೈಸೂರು ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಪಿ ಶಿವರಾಜು ಮಾತನಾಡಿ, ಮನೋಧರ್ಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ಹೀಗಾಗಿ ಎಲ್ಲರೂ ಮನೋಧರ್ಮ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳಿ, ಐಎಎಸ್ ಹಾಗೂ ಕೆಎಎಸ್ ಅಧಿಕಾರಿಯಾಗಬೇಕಾದರೆ ಅದು ನಮ್ಮಿಂದ ಏನನ್ನೊ ಬಯಸುತ್ತಿದೆ ಎಂಬುದನ್ನು ನಾವು ಮನಗಾಣಬೇಕು. ಜೊತೆಗೆ ಅದನ್ನ ಪೂರ್ಣಗೊಳಿಸುವ ಛಲ ವಿಶ್ವಾಸವಿರಬೇಕು ಎಂದು ಹೇಳಿದರು.

ಅಧಿಕಾರಿಗಳಿಗೆ ತುಂಬಾ ಒತ್ತಡ ಇರುತ್ತದೆ. ಎಲ್ಲಾ ಒತ್ತಡವನ್ನು ನಿವಾರಿಸಿಕೊಂಡು ಸಾರ್ವಜನಿಕ ಸೇವೆ ಮಾಡಬೇಕು. ನಮ್ಮ ದೇಶವೇ ನಮಗೆ ನಾಯಕ. ಇಲ್ಲಿನ ಪರೀಕ್ಷಾ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿದೆ. ಸರ್ಕಾರಿ ಸೇವೆಗೆ ಬಂದ ಮೇಲೆ ಸೇವಾ ಮನೋಭಾವ ಬೆಳಿಸಿಕೊಳ್ಳಬೇಕು ಎಂದರು.

ನಿಮ್ಮಲ್ಲಿ ವಿಶಿಷ್ಟ ಚೇತನವಿದೆ. ಸೋಲದೆ ಮುನ್ನುಗ್ಗಿ. ಸೋತೆ ಎಂದು ಕೊರಗಬೇಡಿ. ಸೋಲಿಗೆ ಸಾವಿರ ಕಾರಣ ಇರುತ್ತದೆ. ಗೆಲುವಿಗೆ ಯಾವುದೇ ಕಾರಣವಿರಲ್ಲ. ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ ಪ್ರತಿಯೊಬ್ಬರ ಯಶಸ್ಸಿಗೆ ಪರಿಶ್ರಮ ಇರಬೇಕು, ಜೊತೆಗೆ ನಿಮ್ಮೆಲ್ಲರ ಗೆಲುವಿಗೆ ನೀವೇ ಹೊಣೆಯಾಗುತ್ತೀರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಕೆ.ಬಿ ಪ್ರವೀಣ, ಡೀನ್ ಗಳಾದ ಡಾ. ಎನ್. ಲಕ್ಷ್ಮಿ, ಪ್ರೊ. ರಮಾನಾಥಂನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿಬ್ಬಂದಿಗಳಾದ ಸಿದ್ದೇಶ್ ಹೊನ್ನೂರ್, ಗಣೇಶ್ ಕೆ.ಜಿ.ಕೊಪ್ಪಲ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

4 mins ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

7 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

10 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

16 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

22 mins ago