LakshmiHebbalka
ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಹೇಳಿದರು.
ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ ಮೂವರಲ್ಲಿ ಇಬ್ಬರು ಈ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಮನಸ್ಸು ಮಾಡಿದ್ದರೆ 2004ರಲ್ಲೆ ಅಧಿಕಾರ ಹಿಡಿಯಬಹುದಿತ್ತು. ಜವಹರಲಾಲ್ ನೆಹರು ಅವರು ಅಗರ್ಭ ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ಹೇಳಿದರು.
ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಬೇಕು, ನಾನು ಕೂಡ ಬೂತ್ ಏಜೆಂಟ್, ಕೌಟಿಂಗ್ ಏಜೆಂಟ್ ಆಗಿ ಕೆಲಸ ಮಾಡಿರುವೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದನ್ನು ಗುರುತಿಸಿ ಟಿಕೆಟ್ ನೀಡಲಾಯಿತು. ಇದೀಗ ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬಳೇ ಮಹಿಳಾ ಮಂತ್ರಿಯಾಗಿರುವೆ. ನನಗೆ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.
ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು ಕಳೆದ ಚುನಾವಣೆಯಲ್ಲಿ ಸೋತರೂ ಕಾರ್ಯಕರ್ತರ, ಕ್ಷೇತ್ರದ ಒಡನಾಟ ಬಿಟ್ಟಿಲ್ಲ. ಜನರ ಕಷ್ಟ ಸುಖದ ಬಗ್ಗೆ ಸದಾ ಯೋಚನೆ ಮಾಡುತ್ತಾರೆ ಎಂದರು.
ನಿಕಟ ಪೂರ್ವ ಅಧ್ಯಕ್ಷ ಶೇಖರ್ ಪೂಜಾರಿ ಅವರು ನೂತನ ಅಧ್ಯಕ್ಷರಾದ ಭರತ್ ದೇವಾಡಿಗ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಅಶೋಕ್ ಕೊಡವೂರು, ಉದಯ್ ಕುಮಾರ್ ಶೆಟ್ಟಿ, ಮುಖಂಡರಾದ ರಾಜು ಪೂಜಾರಿ, ಕಿಶನ್ ಹೆಗ್ಡೆ, ರಘುರಾಮ್ ಶೆಟ್ಟಿ, ಅರವಿಂದ್ ಪೂಜಾರಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…