ಮೈಸೂರು

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಗೌಸಿಯಾನಗರದ ನಿವಾಸಿ ಶಹಬಾಜ್(26) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಸಿಯಾನಗರದ ಜುಬೇರ್ ಹಾಗೂ ಇಬ್ಬರು ಆರೋಪಿಗಳನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಫ್ಯಾಬ್ರಿಕೇಟರ್ ಆಗಿ ಕೆಲಸ ಮಾಡುತ್ತಿದ್ದ ಶಹಬಾಜ್, ಗೌಸಿಯಾ ನಗರದಲ್ಲಿ ರಾತ್ರಿ ವೇಳೆ ಬಾಡಿಗೆ ಪಡೆದು ಆಟೋ ನಿಲ್ಲಿಸುವ ಜಾಗದ ನಿರ್ವಹಣೆ ಮಾಡುತ್ತಿದ್ದ. ಇದರ ಜೊತೆಗೆ ಕೆಲ ಹಣಕಾಸಿಗೆ ಸಂಬಂಧಿಸಿದಂತೆ ವ್ಯವಹಾರ ಕೂಡ ನಡೆಸುತ್ತಿದ್ದ.

ಸೋಮವಾರ ತಡರಾತ್ರಿ ಸುಮಾರು 12.30ರ ಸಮಯದಲ್ಲಿ ನಾಲ್ವರು ಸ್ನೇಹಿತರೊಂದಿಗೆ ಆಟೋದಲ್ಲಿ ಬಂದ ಜುಬೇರ್, ಆಟೋ ನಿಲ್ಲಿಸಲು ನೀಡುವ ಬಾಡಿಗೆ ವಿಚಾರದಲ್ಲಿ ಜಗಳ ಆರಂಭಿಸಿದ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿತ್ತು. ಈ ಸಂಬಂಧ ತನಿಖೆ ಆರಂಭಿಸಿದ್ದ ಉದಯಗಿರಿ ಠಾಣೆ ಇನ್ಸ್‌ಪೆಕ್ಟರ್ ಸುಧಾಕರ್ ಮತ್ತು ಸಿಬ್ಬಂದಿ, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

3 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

4 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

4 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

5 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

5 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

6 hours ago