ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದರು.
ಯುಗಾದಿ ಹಬ್ಬದಂದು ಬೆಳ್ಳಂ ಬೆಳಿಗ್ಗೆ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಹಾಕುವ ಮೂಲಕ ಹೊಸ ವರ್ಷದ ದಿನ ಕೃಷಿ ಚಟುವಟಿಕೆ ಆರಂಭಿಸಿ ಈ ಬಾರಿ ಬೆಳೆ ಚೆನ್ನಾಗಿ ಬಂದು ನೆಮ್ಮದಿಯ ಜೀವನ ಸಿಗಲೆಂದು ಬೇಡುವುದು ತಲೆ ತಲಾಂತರಗಳಿಂದ ನಡೆದು ಬಂದ ಸಂಪ್ರದಾಯ.
ಅದರಂತೆ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಎತ್ತುಗಳನ್ನು ತೊಳೆದು ಅವುಗಳಿಗೆ ಬಣ್ಣ ಬಳಿದು ಸಿಂಗರಿಸಿ, ಕೊಟ್ಟಿಗೆ ಗೊಬ್ಬರಕ್ಕೆ ಪೂಜೆ ಸಲ್ಲಿಸುತ್ತಾ, ತಮ್ಮ ತಮ್ಮ ಜಮೀನುಗಳಿಗೆ ಹೋಗಿ ಗೊಬ್ಬರವನ್ನು ಹಾಕಿ ಈ ಬಾರಿ ಒಳ್ಳೆಯ ಫಸಲು ಬರಲಿ ಎಂದು ರೈತರು ಪ್ರಾರ್ಥನೆ ಸಲ್ಲಿಸಿದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…