ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಸಂಭ್ರಮ ಮನೆಮಾಡಿದ್ದು, ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲೂ ಯುಗಾದಿ ಜಾತ್ರಾ ಸಂಭ್ರಮ ಕಳೆಗಟ್ಟಿದೆ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ತ್ರಿವೇಣಿ ಸಂಗಮಕ್ಕೆ ಆಗಮಿಸುತ್ತಿರುವ ಭಕ್ತರು ಪುಣ್ಯಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ತ್ರಿವೇಣಿ ಸಂಗಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ ಭಾಗದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಆಗಮಿಸಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.





