ಮೈಸೂರು

ಯುವ ನಿಧಿ: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿ ಅಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ.

ಯುವ ನಿಧಿ ಯೋಜನೆಯ ನಿರುದ್ಯೋಗ ಭತ್ಯೆ ಹಣ ಪಡೆಯಬೇಕಾದರೆ ಪ್ರತಿ ತಿಂಗಳು 25ನೇ ದಿನಾಂಕದೊಳಗೆ ಕರ್ನಾಟಕ ಸರ್ಕಾರದ ಸೇವಾ ಸಿಂಧು ವೆಬ್‌ಸೈಟ್ ಮೂಲಕ ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

2023 ರ ಸಾಲಿನಲ್ಲಿ ತೇರ್ಗಡೆಯಾದಂತಹ ಅಭ್ಯರ್ಥಿಗಳಿಗೆ ಯುವ ನಿಧಿ ಕಾರ್ಯಕ್ರಮದ ಅಡಿಯಲ್ಲಿ ಪದವಿಧರರಿಗೆ ಮಾಸಿಕ ರೂ.3000 ಹಾಗೂ ಡಿಪ್ಲೋಮಾದಾರರುಗಳಿಗೆ ಮಾಸಿಕ ರೂ.1500 ಗಳನ್ನು ಸರ್ಕಾರದ ವತಿಯಿಂದ ನೀಡುತ್ತಲಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಅರ್ಹ ನಿರುದ್ಯೋಗ ಅಭ್ಯರ್ಥಿಗಳು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಜೋಡಣೆಯ ಬ್ಯಾಂಕ್‌ಖಾತೆಯನ್ನು ಹೊಂದಿರಬೇಕು ಎಂದು  ಪ್ರಕಟಣೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

2 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

5 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

6 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

6 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

6 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

7 hours ago