ಮೈಸೂರು: ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಇದೇ ಏ.26ರ ಶುಕ್ರವಾರದಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರ ಮಹತ್ವದ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26ರ ಶುಕ್ರವಾರದಂದು ಚುನಾವಣೆ ನಡೆಯಲಿದ್ದು, ಆ ದಿನಂದು ಮೈಸೂರಿನ ಪ್ರಸಿದ್ಧ ಸ್ಥಳಗಳಾದ ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ(ಮೈಸೂರು ಜೂ), ಕಾರಂಜಿ ಕೆರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂದ ವಿಧಿಸಲಾಗಿದೆ ಎಂದು ಹೇಳಲಾಗಿದೆ.
ಚುನಾವಣೆಗೆ ಹೆಚ್ಚಿನ ಮನ್ನಣೆ ನೀಡುವ ಉದ್ದೇಶದಿಂದಾಗಿ ಈ ಕಾರ್ಯ ಕೈಗೊಳ್ಳಲಾಗಿದೆ. ಚುನಾವಣೆ ನಂತರದ ದಿನಗಳಾದ ಶನಿವಾರ ಹಾಗೂ ಭಾನುವಾರ ರಜಾ ದಿನಗಳಾಗಿದ್ದು, ಹೆಚ್ಚಿನ ಪ್ರವಾಸಿಗರು ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಏ.೩೦ ರ ವಾರದ ರಜೆಯನ್ನು ತೆಗೆದುಹಾಕಲಿದೆ. ಇದರಿಂದ ಬೇಸಿಗೆಯಲ್ಲಿ ಹೆಚ್ಚುತ್ತಿರುವ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಪ್ರಾಧಿಕಾರ ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗಿದೆ.





