ಮೈಸೂರು

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿತ್ತು. ೮ ತಿಂಗಳ ಹಿಂದೆ ಮೇಯಲು ಬಿಟ್ಟಿದ್ದ ವೇಳೆ ಕಾಡಿನಲ್ಲಿ ಗುಂಡಿಗೆ ಕಾಲು ಹಾಕಿ ಮಂಡಿ ನೋವು ಮಾಡಿಕೊಂಡಿತ್ತು.

ಅಂದಿನಿಂದ ಸಾಕಾನೆ ಶಿಬಿರದಲ್ಲಿ ಪಶುವೈದ್ಯ ಡಾ.ರಮೇಶ್ ಚಿಕಿತ್ಸೆ ನೀಡುತ್ತಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಕುಂಟುತ್ತಲೇ ಶಿಬಿರದಲ್ಲಿ ಅತ್ತಿಂದಿತ್ತ ಓಡಾಡಿಕೊಂಡಿದ್ದ ಅಭಿಗೆ ಕೆಲ ದಿನಗಳಿಂದ ನಡೆಯಲಾಗದೆ ಮಲಗಿದ್ದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದೆ. ವಿಷಯ ತಿಳಿದು ಡಿಸಿಎಫ್ ಸೀಮಾ, ಎಸಿಎಫ್ಲ ಕ್ಷ್ಮೀಕಾಂತ್, ಆರ್‌ಎಫ್‌ಒ ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಆನೆಯ ಕಳೇಬರವನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

11 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

47 mins ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

1 hour ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

1 hour ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

2 hours ago