ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿತ್ತು. ೮ ತಿಂಗಳ ಹಿಂದೆ ಮೇಯಲು ಬಿಟ್ಟಿದ್ದ ವೇಳೆ ಕಾಡಿನಲ್ಲಿ ಗುಂಡಿಗೆ ಕಾಲು ಹಾಕಿ ಮಂಡಿ ನೋವು ಮಾಡಿಕೊಂಡಿತ್ತು.
ಅಂದಿನಿಂದ ಸಾಕಾನೆ ಶಿಬಿರದಲ್ಲಿ ಪಶುವೈದ್ಯ ಡಾ.ರಮೇಶ್ ಚಿಕಿತ್ಸೆ ನೀಡುತ್ತಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಕುಂಟುತ್ತಲೇ ಶಿಬಿರದಲ್ಲಿ ಅತ್ತಿಂದಿತ್ತ ಓಡಾಡಿಕೊಂಡಿದ್ದ ಅಭಿಗೆ ಕೆಲ ದಿನಗಳಿಂದ ನಡೆಯಲಾಗದೆ ಮಲಗಿದ್ದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದೆ. ವಿಷಯ ತಿಳಿದು ಡಿಸಿಎಫ್ ಸೀಮಾ, ಎಸಿಎಫ್ಲ ಕ್ಷ್ಮೀಕಾಂತ್, ಆರ್‌ಎಫ್‌ಒ ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಆನೆಯ ಕಳೇಬರವನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…