ಜಿಲ್ಲೆಗಳು

ಅತ್ಯಾಚಾರ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ

ಹುಣಸೂರು ತಾಲೂಕಿನ ರತ್ನಪುರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಸಂತ್ರಸ್ಥೆ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಸಲ್ಮಾನ್‌ ಖಾನ್‌ ಎಂಬ ಅತ್ಯಾಚಾರ ಆರೋಪಿಗೆ ಮೈಸೂರು ಕೋರ್ಟ್‌ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಈತ ಅದೇ ಗ್ರಾಮದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಇಷ್ಟಕ್ಕೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದ ಎಂಬ ಆರೋಪದಡಿಯಲ್ಲಿ ಯುವತಿ ದೂರನ್ನು ನೀಡಿದ್ದಳು. ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲಿನ ತನಿಖಾಧಿಕಾರಿ ಕೆ.ಸಿ ಪೂವಯ್ಯ ಈ ಪ್ರಕರಣದ ತನಿಖೆಯನ್ನು ಪೂರೈಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಯ ವಿರುದ್ಧ ಸಾಕ್ಷಾಧಾರಗಳು ಹೊಂದಾಣಿಕೆಯಾದ ಕಾರಣ ಆತನಿಗೆ ಐಪಿಸಿ ಸೆಕ್ಷನ್‌ 376/2 ಅಡಿಯಲ್ಲಿ 10 ವರ್ಷಗಳ ಸೆರೆವಾಸ ಹಾಗೂ 30 ಸಾವಿರ ರೂಪಾಯಿ ದಂಡ ಹಾಗೂ ಐಪಿಸಿ ಸೆಕ್ಷನ್‌ 417 ಪ್ರಕಾರ 1 ವರ್ಷ ಸೆರೆವಾಸ ಹಾಗೂ 5000 ದಂಡವನ್ನು ವಿಧಿಸಿದೆ. ಆರೋಪಿ 30000 ರೂಪಾಯಿಗಳನ್ನು ಸಂತ್ರಸ್ಥೆಗೆ ಪರಿಹಾರ ಧನವಾಗಿ ನೀಡಬೇಕು, ಉಳಿದ 5000 ರೂಪಾಯಿಗಳನ್ನು ದಂಡವಾಗಿ ಸರ್ಕಾರಕ್ಕೆ ಪಾವತಿ ಮಾಡಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ.

andolana

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

1 min ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

16 mins ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

1 hour ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

6 hours ago