ಜಿಲ್ಲೆಗಳು

ವಲಸೆ ವ್ಯಾಪಾರಿಗಳಿಗೆ ಬೆಳಕಾದ ದಸರಾ

ನಗರದಲ್ಲಿ ಸಂಸಾರ ಸಮೇತ ಬಿಡಾರ ಹೂಡಿರುವ ವಲಸೆ ವ್ಯಾಪಾರಿಗಳು

-ಆಕಾಶ್‌ ಆರ್‌.ಎಸ್‌

ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷದಿಂದ ಅದ್ಧೂರಿ ದಸರಾ ಆಚರಣೆ ಇಲ್ಲದೇ ವ್ಯಾಪಾರ, ವ್ಯವಹಾರ ಮಂಗಾಗಿತ್ತು. ಅದರಲ್ಲಿಯೂ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುವ ವಲಸೆ ವ್ಯಾಪಾರಿಗಳ ಮುಖದಲ್ಲಿ ನಿರಾಸೆ ತುಂಬಿತ್ತು. ಆದರೆ ಈ ಬಾರಿಯ ಅದ್ಧೂರಿ ದಸರಾ ಇವರ ಬಾಳಲ್ಲಿ ಬೆಳಕು ಚೆಲ್ಲಿದೆ.

ದಸರಾ ಉತ್ಸವದ ಹಿನ್ನೆಲೆಯಲ್ಲಿ ಇಡೀ ನಗರವೇ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಎಲ್ಲಿ ನೋಡಿದರೂ ದೀಪಾಲಂಕಾರ, ಜನಜಂಗುಳಿ, ಪ್ರವಾಸಿಗರಲ್ಲಿ ಹರ್ಷೋದ್ಗಾರ ಮನೆ ಮಾಡಿದೆ. ವಿಭೃಂಜಣೆಯಿಂದ ನಡೆಯುತ್ತಿರುವ ಉತ್ಸವದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಗಳು, ವೇದಿಕೆ ಕಾರ್ಯಕ್ರಮಗಳೂ ಸಾಗುತ್ತಿವೆ. ಇದನ್ನು ಕಣ್ತುಂಬಿಕೊಳ್ಳಲು ಜನ ಸಾಗರವೇ ಸೇರುತ್ತಿದೆ. ಈ ವೇಳೆಯಲ್ಲಿ ರಸ್ತೆ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಹಾಗೂ ವಲಸೆ ವ್ಯಾಪಾರಿಗಳು ಒಂದಷ್ಟು ಕಾಸು ಸಂಪಾದನೆ ಮಾಡಲು ಸಹಾಯವಾಗುತ್ತಿದೆ.

ನಗರದ ಹಾರ್ಡಿಂಗ್ ಸರ್ಕಲ್, ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ, ದೇವರಾಜ ಅರಸು ರಸ್ತೆ, ಚಿಕ್ಕ ಗಡಿಯಾರ ಸರ್ಕಲ್, ಗನ್ ಹೌಸ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಅಗ್ರಹಾರ, ಸಯ್ಯಾಜಿರಾವ್ ರಸ್ತೆ, ದೊಡ್ಡ ಕೆರೆ ಮೈದಾನ ಸೇರಿ ಎಲ್ಲ ಕಡೆಗಳಲ್ಲಿಯೂ ಪಳಪಳ ಮಿನುಗುವ ಬಲೂನ್‌ಗಳು, ಪ್ಲಾಸ್ಟಿಕ್ ಬೊಂಬೆಗಳು, ಪ್ರಾಣಿಗಳ ಮುಖವಾಡ, ಬಣ್ಣ ಬಣ್ಣ ಆಟಿಕೆಗಳು, ಪೀಪಿಗಳು ಸದ್ದು ಮಾಡುತ್ತಿವೆ.

ದಸರಾ ಕೇವಲ ಸಂಭ್ರಮದ ಗೂಡಾಗದೆ ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ, ಬಿಹಾರ, ತಮಿಳುನಾಡು ಸೇರಿ ವಿವಿಧ ರಾಜ್ಯಗಳಿಂದ ಆಗಮಿಸಿರುವ ವಲಸೆ ವ್ಯಾಪಾರಿಗಳಿಗೆ ಆಸರೆಯ ಆಚರಣೆಯಾಗಿದೆ. ವಲಸೆಗಾರರು ಸ್ವತಃ ಸ್ವಂತ ಊರಿನ ಜಾತ್ರೆಗೆ ಬರುವಂತೆ ಇಡೀ ಸಂಸಾರದ ಸಮೇತವಾಗಿ ಮೈಸೂರಿಗೆ ಬಂದು ಬಿಡಾರ ಹೂಡಿದ್ದಾರೆ. ರಸ್ತೆ ಬದಿಯಲ್ಲೆ ಹಾಸಿಗೆ ಹಾಕಿಕೊಂಡು ಮಕ್ಕಳನ್ನು ಪಾಲನೆ ಪೋಷಣೆ ಮಾಡುತ್ತಾ, ಅಲ್ಲೇ ಊಟೋಪಚಾರವನ್ನೂ ನಡೆಸುತ್ತಿದ್ದಾರೆ. ಇವರಲ್ಲಿ ಮಹಿಳಾ ವ್ಯಾಪಾರಿಗಳೇ ಹೆಚ್ಚಾಗಿದ್ದು, ಪ್ರವಾಸಿಗರ ಮನವೊಲಿಸಿ ವ್ಯಾಪಾರ ಮಾಡುತ್ತಿರುವ ದೃಶ್ಯ ನಗರದ ಹೃದಯ ಭಾಗದಲ್ಲಿ ಸಾಮಾನ್ಯವಾಗಿದೆ.

 

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

5 hours ago