ಮೈಸೂರು : ಈ ಸಾಲಿನ 2022 ರ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 5 ಶಿಬಿರದಿಂದ ಆನೆಗಳು ಕರೆತರಲಾಗುತ್ತಿದೆ.
ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ 7ರಂದು ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆ ಪೂರ್ವ ತಯಾರಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ವರ್ಷದಂತೆ ಗಜಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಆಗಸ್ಟ್ ೭ ರಂದು ಬೆಳಿಗ್ಗೆ ೧೧ ಗಂಟೆಗೆ ಆರಂಭವಾಗಲಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಸೋಂಕಿನಿಂದಾಗಿ ಪ್ರಚಾರವಿಲ್ಲದೆ, ಸದ್ದಿಲ್ಲದೆ ಆಗಮಿಸುತ್ತಿದ್ದ ಗಜಪಡೆಗೆ ಈ ಸಲ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಮೖೆಸೂರು ತಾಯಾರಾಗಿದೆ.
ಕೊರೋನ ಸಮಯದಲ್ಲಿ ಗಜ ಪಯಣವನ್ನು ಕೇವಲ ಅಧಿಕಾರಿಗಳೇ ಸೇರಿ ಮಾಡುತ್ತಿದ್ದರು. ಎಲ್ಲಾ ಉಸ್ತುವಾರಿ ಸಚಿವರಿಂದ ಪೂಜೆ ನೆರವೇರಿಸಿ ಮೈಸೂರಿಗೆ ಆನೆಗಳನ್ನು ಕರೆತರಲಾಗುತ್ತಿತ್ತು. ಆದರೆ, ಈ ಸಾಲಿನಿಂದ ಹೊಸ ರೂಪ ನೀಡಲಾಗುತ್ತಿದೆ. ಸುಮಾರು ೫ ಸಾವಿರ ಜನರನ್ನು ಸೇರಿಸಿ ಆನೆಗಳಿಗೆ ಸ್ವಾಗತಮಾಡಿ ಬರಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆ, ಶಾಲಾ – ಕಾಲೇಜುಗಳು, ಮಹಿಳಾ ಸಂಘಗಳಿಗೂ ಮಾಹಿತಿ ನೀಡಿ, ಗಜ ಪಯಣ ಕಾರ್ಯಕ್ರಮಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.
ಮೈಸೂರಿನ ವಿವಿಧೆಡೆ ಹಾಗೂ ಹುಣಸೂರು ಮುಖ್ಯರಸ್ತೆಯಲ್ಲಿ ಸುಮಾರು ೨೦ ಸ್ಥಳಗಳಲ್ಲಿ ದೊಡ್ಡ -ದೊಡ್ಡ ಫಲಕಗಳನ್ನು ಪ್ರದರ್ಶಿಸಿ, ಆಗಸ್ಟ್ ೦೭ರಂದು ನಡೆಯುವ ಗಜಪಯಣಕ್ಕೆ ಸರ್ವರಿಗೂ ಸ್ವಾಗತ ಕೋರಲು ಅರಣ್ಯ ಇಲಾಖೆ ಕಾರ್ಯಕ್ರಮ ರೂಪಿಸಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ವಿವರ
ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ
ಬಳ್ಳೆ ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ
ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ
ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ
ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ
ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ದಿಂದ ಮಹೇಂದ್ರ( 39 ವರ್ಷ),
ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ – ಧನಂಜಯ ಆನೆ (44 ವರ್ಷ ಗಂಡು),
ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂತ – ಕಾವೇರಿ (45 ವರ್ಷ ಹೆಣ್ಣು)
ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ – ಗೋಪಿ ( 40 ವರ್ಷ ಗಂಡು )
ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ- ಶ್ರೀರಾಮ (41 ವರ್ಷ ಗಂಡು )
ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ- ವಿಜಯ ( 63 ವರ್ಷ ಹೆಣ್ಣು)
ರಾಮಪುರ ಆನೆ ಶಿಬಿರ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂತ
ಚೈತ್ರ 49 ವರ್ಷ (ಹೆಣ್ಣು ಆನೆ )
ಲಕ್ಷ್ಮೀ 21 ವರ್ಷ (ಹೆಣ್ಣು ಆನೆ )
ಪಾರ್ಥ ಸಾರಥಿ( 18 ವರ್ಷ ಗಂಡು ಆನೆ)
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…