ಜಿಲ್ಲೆಗಳು

ಮೈಸೂರು : ದಸರಾ ಕವಿಗೋಷ್ಠಿಯಲ್ಲಿ ʼಬ್ಯಾರಿʼ ಕವಿತೆಗೆ ಅವಕಾಶ

ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ.

ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮೊಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿತೆಯನ್ನು ವಾಚಿಸಲಿದ್ದಾರೆ. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ಅವರಿಗೆ ಗುರುವಾರ ಅಧಿಕೃತ ಆಹ್ವಾನವನ್ನು ನೀಡಲಾಗಿದೆ.

ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ರಾಜ್ಯದ ಇತರೆಲ್ಲ ಭಾಷೆಗಳಿಗೆ ಅವಕಾಶ ನೀಡಿದ್ದರೂ ಬ್ಯಾರಿ ಭಾಷೆಗೆ ಅವಕಾಶ ನೀಡಿರಲಿಲ್ಲ. ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬೆಂಗಳೂರು ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಟಿ.ಕೆ‌.ಷರೀಫ್ ಸಹಿತ ಹಲವು ಗಣ್ಯರು ಸರಕಾರದ ತಾರತಮ್ಯ ನೀತಿಯನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಬ್ಯಾರಿ ಭಾಷೆಗೆ ಕವಿಗೋಷ್ಠಿಯಲ್ಲಿ ಪ್ರಾತಿನಿಧ್ಯ ಒದಗಿಸದೇ ಇರುವುದಕ್ಕೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮೈಸೂರಿನ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಹಮೀದ್ ಹಾಜಿಯವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ದಸರಾ ಉಪ ಸಮಿತಿಯ ಅಧ್ಯಕ್ಷರನ್ನು ಭೇಟಿಯಾಗಿ ಬ್ಯಾರಿ ಕವಿತೆಗೆ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಪರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿಯೊಬ್ಬರಿಗೆ ಪ್ರಾತಿನಿಧ್ಯ ನೀಡಲು ಉಪಸಮಿತಿ ನಿರ್ಧರಿಸಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago