Mysore
17
clear sky

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮೈಸೂರು ದಸರಾ ಮಹೋತ್ಸವಕ್ಕೆ ಅಭಿನಂದಿಸಿದ ಪ್ರಧಾನಿ ಮೋದಿ

ಬೆಂಗಳೂರು– ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ.

ಮೈಸೂರು ದಸರಾ ಅದ್ಭುತವಾಗಿದೆ. ಮೈಸೂರಿನ ಸಂಸ್ಕೃತಿ ಪರಂಪರೆಯನ್ನು ಜನ ರಕ್ಷಣೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
2022 ರ ವಿಶ್ವ ಯೋಗ ದಿನದಂದು ಮೈಸೂರಿಗೆ ಭೇಟಿ ನೀಡಿದ್ದೆ ಎಂದು ಮೋದಿ ನೆನಪು ಮಾಡಿಕೊಂಡಿದ್ದಾರೆ.
ಕೊರೋನಾ ಕಾರಣದಿಂದ ಎರಡು ವರ್ಷ ಕಳೆಗುಂದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ವಿಜೃಂಭಣೆಯಿಂದ ನೆರವೇರಿದೆ. ಲಕ್ಷಾಂತರ ಸಂಖ್ಯೆಯ ಭಕ್ತರು, ಪ್ರವಾಸಿಗರು ಭಾಗಿಯಾಗಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾಗೆ ಚಾಲನೆ ನೀಡಿದ್ದರು. ವೈಭವದಿಂದ ನಡೆದ ದಸರಾ ಮಹೋತ್ಸವದ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿ ಟ್ರೀಟ್ ಮಾಡಿದ್ದಾರೆ.
ಮೈಸೂರು ದಸರಾ ಅದ್ಭುತವಾಗಿದೆ. ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಸುಂದರವಾಗಿ ಉಳಿಸಿಕೊಂಡಿರುವ ಮೈಸೂರಿನ ಜನತೆಯನ್ನು ನಾನು ಶ್ಲಾಘಿಸುತ್ತೇನೆ. 2022 ರ ಯೋಗ ದಿನದಂದು ನನ್ನ ಮೈಸೂರು ಭೇಟಿಗಳ ಅಚ್ಚುಮೆಚ್ಚಿನ ನೆನಪುಗಳಿವೆ ಎಂದು ತಿಳಿಸಿದ್ದಾರೆ..

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!