ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಇಂದಿನಿಂದ ದಸರಾ ಹಬ್ಬವು ಆರಂಭವಾಗಲಿದೆ.

ಈ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವು ಸಿಂಗಾರಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ.

ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು ಸೋಮವಾರ ಹೊಸದಿಲ್ಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಲಿದ್ದಾರೆ.

ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಲಿದ್ದಾರೆ.





