ಕುಪ್ಪಣ್ಣ ಪಾರ್ಕ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ಗೆ ಮರುಜೀವ
ಮೈಸೂರು: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ದಸರೆಯ ಉದ್ಘಾಟನೆಗಾಗಿ ಅರಮನೆ ನಗರಕ್ಕೆ ಬರುತ್ತಿದ್ದಂತೆ ನಗರದಲ್ಲಿ ರಾಷ್ಟ್ರಪತಿಭವನವೂ ನಿರ್ಮಾಣವಾಗಿದೆ ! ಆದರೆ ಈ ಭವನದ ಸೌಂದರ್ಯವನ್ನು ವೀಕ್ಷಿಸಬಹುದೇ ಹೊರತು ತಂಗಲು ಸಾಧ್ಯವಿಲ್ಲ. ದಸರಾ ಅಂಗವಾಗಿ ನಗರದ ಕುಪ್ಪಣ್ಣ ಗಾರ್ಡನ್‌ನಲ್ಲಿ ಆಯೋಜನೆ ಮಾಡಲಾಗಿದ್ದ ಫಲಪಷ್ಪ ಪ್ರದರ್ಶನದಲ್ಲಿ ರಾಷ್ಟ್ರಪತಿ ಭವನ ಪ್ರಧಾನ ಆಕರ್ಷಣೆಯಾಗಿದೆ.
7 ಅಡಿಯ ಜೇನುಹುಳು, 12 ಅಡಿಯ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದ್ದು ನೋಡುಗರ ಮೈ ಮನಗಳನ್ನು ಪುಳಕಿತಗೊಳಿಸುತ್ತಿದೆ. 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ನಿರ್ಮಿಸಿದ ಮನೆ ಇತರ ವೈವಿಧ್ಯಮಯ ಹೂವಿನ ಕಲಾಕೃತಿಗಳು ನೋಡುಗರ ಗಮನ ಸೆಳೆಯುತ್ತಿದೆ.
ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ಹೂವುಗಳಿಂದ ಅಲಂಕೃತವಾಗಿದೆ. ಪ್ರತಿದಿನ ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಬಗಾದಿ ಗೌತಮ್, ಜಿಪಂ ಸಿಇಓ ಪೂರ್ಣಿಮಾ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರುದ್ರೇಶ್, ಮೇಯರ್ ಶಿವಕುಮಾರ್, ಮೈ.ವಿ.ಶಂಕರ್, ಹಿರಿಯ ಸಹಾಯಕ ನಿರ್ದೇಶರಾದ ಸುವೇಧಾ ಮತ್ತಿತರರು ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…