ಮೈಸೂರು: ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಇಂದು ಸಂಸದ ಪ್ರತಾಪ ಸಿಂಹ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.ಈ ಸಂದರ್ಭದಲ್ಲಿ ರಾಜ್ಯದ ಕೆಲವು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವಂತೆ ಕೇಂದ್ರ ಸಚಿವ ಗಡ್ಕರಿ ಮನವಿ ಸಲ್ಲಿಸಿದರು.
ಚೆನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ-ವಿರಾಜಪೇಟೆ ಮಾರ್ಗವಾಗಿ ಮಾಕುಟ್ಟ (ಕೇರಳ ಬಾರ್ಡರ್) ಸಂಪರ್ಕಿಸುವ ರಸ್ತೆ.ಮೈಸೂರು—ಹುಣಸೂರು-ಗೋಣಿಕೊಪ್ಪ ಮಾರ್ಗವಾಗಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.ಕೆಳಪಟ್ಟ-ಮಾನಂದವಾಡಿ-ಹೆಚ್.ಡಿ.ಕೋಟೆ-ಜಯಪುರ ಮಾರ್ಗವಾಗಿ ಮೈಸೂರು ಸಂಪರ್ಕಿಸುವ ರಸ್ತೆ.ಶ್ರೀರಂಗಪಟ್ಟಣ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ಮಾರ್ಗವಾಗಿ ಅರಸೀಕೆರೆ ಸಂಪರ್ಕಿಸುವ ರಸ್ತೆ.ಮಳವಳ್ಳಿಯಿಂದ ಮೈಸೂರು ಸಂಪರ್ಕಿಸುವ ರಸ್ತೆ.ಪಾಂಡವಪುರ ಅರಸೀಕೆರೆ ಮಾರ್ಗವಾಗಿ ಕೆ.ಆರ್.ಪೇಟೆ ಸಂಪರ್ಕಿಸುವ ರಸ್ತೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…