ಅಮಾಯಕರನ್ನು ಹನಿಟ್ರ್ಯಾಪ್ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್ ಒಂದನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಫಜಲುಲ್ಲಾ ರಹಮಾನ್, ರಿಜ್ವಾನ್ ಹಾಗೂ ಮೋನಾ ಎಂಬುವರು ಬಂಧನಕ್ಕೊಳಗಾಗಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಸುನ್ನಿ ಎಂಬುವವರು ಮೈಸೂರಿನ ಮೂಲಕ ಕೇರಳಗೆ ಪ್ರಯಾಣ ಬೆಳೆಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳಿಗೆ ಪರಿಚಯವಾಗಿದ್ದು, ಮಾನಂದವಾಡಿ ರಸ್ತೆಯಲ್ಲಿ ಸುನ್ನಿ ಅವರನ್ನು ಅಡ್ಡಗಟ್ಟಿದ್ದಾರೆ.
ಬಳಿಕ ಆರೋಪಿಗಳು ಸುನ್ನಿ ಅವರನ್ನು ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಮೋನ ಜತೆ ನಗ್ನವಾಗಿ ಮಲಗಿಸಿ ಫೋಟೊ ಮತ್ತು ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ನಂತರ ಈ ಫೋಟೊ ಹಾಗೂ ವಿಡಿಯೊಗಳನ್ನು ಸುನ್ನಿಗೆ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾರೆ.
ಅಲ್ಲದೇ 10 ಲಕ್ಷ ಹಣಕ್ಕೆ ಬೇಡಿಕೆಯನ್ನೂ ಸಹ ಗುಂಪು ಇಟ್ಟಿದ್ದು, ಸುನ್ನಿ 5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗುಂಪು ಸುನ್ನಿ ಧರಿಸಿದ್ದ ಚಿನ್ನದ ಉಂಗುರ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಸುನ್ನಿ ಕೇರಳದ ತಿರುನೆಲ್ಲಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಪ್ರಕರಣ ಮೈಸೂರಿನಲ್ಲಿ ನಡೆದಿದ್ದರಿಂದ ಮೈಸೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಯಿತು. ಹೀಗೆ ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಮಡಿಕೇರಿಯಲ್ಲೂ ಸಹ ಇಂತಹದ್ದೇ ಕೃತ್ಯ ಎಸಗಿರುವುದಾಗಿ ತಂಡ ಬಾಯಿಬಿಟ್ಟಿದ್ದು, ಬಂಧಿತರಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಇನೋವಾ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…