ಮೈಸೂರು: ರಾಜ್ಯ ಸರ್ಕಾರ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಹಿನ್ನಲೆ ದಾಖಲೆ ಪತ್ರಗಳನ್ನು ಮೈಸೂರು ಪೊಲೀಸರು ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದ್ದರು. ಇದೀಗ ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖಾ ವರದಿಯನ್ನು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಸದ್ಯ ಸ್ಯಾಂಟ್ರೋ ರವಿ ಸಿಐಟಿ ಕಸ್ಟಡಿಯಲ್ಲಿ ಇದ್ದು, ಡಿವೈಎಸ್ಪಿ ನರಸಿಂಹಮೂರ್ತಿ ನೇತೃತ್ವದ ತಂಡದಿಂದ ವಿಚಾರಣೆ ನಡೆಯುತ್ತಿದೆ. ಇಂದು ಮತ್ತೆ ರವಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ. ಈ ನಡುವೆ ಹೇಳಿಕೆ ದಾಖಲಿಸಲು ಸ್ಯಾಂಟ್ರೋ ಪತ್ನಿ ಸಿಐಡಿ ಕಚೇರಿಗೆ ಆಗಮಿಸುವ ಸಾಧ್ಯತೆ ಇದ್ದು, ಆಕೆಯ ಹೇಳಿಕೆ ಸೇರಿದಂತೆ ಸಿಐಡಿ ಅಧಿಕಾರಿಗಳು ಪ್ರತಿಯೊಂದು ಮಾಹಿತಿ ಕಲೆ ಹಾಕಿಕೊಳ್ಳಲಿದ್ದಾರೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನುಸಿಐಡಿ ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್ರಿಂದ ಮಾಹಿತಿ ಪಡೆದಿದ್ದಾರೆ.
ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.
ಪತ್ನಿ ಸೇರಿದಂತೆ ಮೂವರ ವಿರುದ್ಧ ಸುಳ್ಳು ಪ್ರಕರಣ ದಾಖಲಿದ ಸ್ಯಾಂಟ್ರೋ ರವಿ ಅವರನ್ನು ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದ. ಜೈಲಿನಿಂದ ಹೊರಬಂದ ಸ್ಯಾಂಟ್ರೋ ರವಿ ಪತ್ನಿ ಸೇರಿದಂತೆ ಮೂವರು ಸ್ಯಾಂಟ್ರೋ ರವಿ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದು, ಪೊಲೀಸರಿಗೆ ಯಾವುದೇ ಸಣ್ಣ ಸುಳಿವು ಸಿಗದಂತೆ ಓಡಾಡಿಕೊಂಡು ಕೋರ್ಟ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ವಿವಿಧ ತಂಡಗಳನ್ನು ರಚಿಸಿ ಅಖಾಡಕ್ಕಿಳಿದಿದ್ದ ಪೊಲೀಸರು ಸ್ಯಾಂಟ್ರೋ ರವಿಯನ್ನು ಗುಜರಾತ್ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…