ಜಿಲ್ಲೆಗಳು

ಮೈಸೂರಿನ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾದ ಪ್ರಕರಣದ ತನಿಖಾ ವರದಿ ಸಿಐಡಿಗೆ ಹಸ್ತಾಂತರ

ಮೈಸೂರು: ರಾಜ್ಯ ಸರ್ಕಾರ ಸ್ಯಾಂಟ್ರೋ ರವಿ  ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಹಿನ್ನಲೆ ದಾಖಲೆ ಪತ್ರಗಳನ್ನು ಮೈಸೂರು ಪೊಲೀಸರು ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದ್ದರು. ಇದೀಗ ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖಾ ವರದಿಯನ್ನು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್‌ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಸದ್ಯ ಸ್ಯಾಂಟ್ರೋ ರವಿ ಸಿಐಟಿ ಕಸ್ಟಡಿಯಲ್ಲಿ ಇದ್ದು, ಡಿವೈಎಸ್​​ಪಿ ನರಸಿಂಹಮೂರ್ತಿ ನೇತೃತ್ವದ ತಂಡದಿಂದ ವಿಚಾರಣೆ  ನಡೆಯುತ್ತಿದೆ. ಇಂದು ಮತ್ತೆ ರವಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ. ಈ ನಡುವೆ ಹೇಳಿಕೆ ದಾಖಲಿಸಲು ಸ್ಯಾಂಟ್ರೋ ಪತ್ನಿ ಸಿಐಡಿ ಕಚೇರಿಗೆ ಆಗಮಿಸುವ ಸಾಧ್ಯತೆ ಇದ್ದು, ಆಕೆಯ ಹೇಳಿಕೆ ಸೇರಿದಂತೆ ಸಿಐಡಿ ಅಧಿಕಾರಿಗಳು ಪ್ರತಿಯೊಂದು ಮಾಹಿತಿ ಕಲೆ ಹಾಕಿಕೊಳ್ಳಲಿದ್ದಾರೆ.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನುಸಿಐಡಿ ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಪಡೆದಿದ್ದಾರೆ.

ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.

ಪತ್ನಿ ಸೇರಿದಂತೆ ಮೂವರ ವಿರುದ್ಧ ಸುಳ್ಳು ಪ್ರಕರಣ ದಾಖಲಿದ ಸ್ಯಾಂಟ್ರೋ ರವಿ ಅವರನ್ನು ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದ. ಜೈಲಿನಿಂದ ಹೊರಬಂದ ಸ್ಯಾಂಟ್ರೋ ರವಿ ಪತ್ನಿ ಸೇರಿದಂತೆ ಮೂವರು ಸ್ಯಾಂಟ್ರೋ ರವಿ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದು, ಪೊಲೀಸರಿಗೆ ಯಾವುದೇ ಸಣ್ಣ ಸುಳಿವು ಸಿಗದಂತೆ ಓಡಾಡಿಕೊಂಡು ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ವಿವಿಧ ತಂಡಗಳನ್ನು ರಚಿಸಿ ಅಖಾಡಕ್ಕಿಳಿದಿದ್ದ ಪೊಲೀಸರು ಸ್ಯಾಂಟ್ರೋ ರವಿಯನ್ನು ಗುಜರಾತ್​ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago