ಮೈಸೂರು: ತ್ರಿಬಲ್ ರೈಡಿಂಗ್ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ.
ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು ಇದ್ದು, ಅವಶ್ಯಕ ದಾಖಲಾತಿಗಳನ್ನು ಪರಿಶೀಲಿಸಿ, ದಂಡ ಪಾವತಿಸಿದ ನಂತರ ಸೂಕ್ತ ತಿಳುವಳಿಕೆ ನೀಡಿ ಕಳುಹಿಸಲಾಗುತ್ತಿದೆ.
ತ್ರಿಬಲ್ ರೈಡಿಂಗ್ ವಿರುದ್ಧ ಈ ವಿಶೇಷ ಕಾರ್ಯಾಚರಣೆಯು ಮುಂದುವರೆಯುವುದಲ್ಲದೇ, ಇತರೆ ಸಂಚಾರ ನಿಯಮಗಳ ಉಲ್ಲಂಘನೆಗಳ ವಿರುದ್ಧವೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಸಂಬಂಧಪಟ್ಟ ಅವಶ್ಯಕ ದಾಖಲಾತಿಗಳನ್ನು ಇಟ್ಟುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಪ್ರಕಟಣೆ ಮೂಲಕ ಸೂಚಿಸಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…