ಜಿಲ್ಲೆಗಳು

ಮೈಸೂರು ದಸರಾ : ಯುವ ಸಂಭ್ರಮದಲ್ಲಿ ಡಾಲಿ ಸಡಗರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9‌ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ‌ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಕೋವಿಡ್ ಅಲೆಯು ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದರಿಂದ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದರು.

ಯುವ ಸಂಭ್ರಮಕ್ಕೆ 100ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ಬಂದಿದ್ದು, ಸಂತೋಷದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸಿಕೊಳ್ಳಲು ಸುವರ್ಣ ಅವಕಾಶ. ಹೀಗಾಗಿ ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಳಿಕ ಡಾಲಿ ಧನಂಜಯ್ ಅವರು ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೇ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದರು.

ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದ ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.

ಇನ್ನು ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ ಟಗರು, ಬಡವರಾಸ್ಕಲ್, ಮಾನ್ಸೂನ್ ರಾಗ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

3 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

31 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago