Mysore
29
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮುಕ್ತ ವಿವಿ ಕುಲಪತಿ ಆಯ್ಕೆಗೆ ಶೋಧನಾ ಸಮಿತಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಶೋಧನಾ ಸಮಿತಿ ರಚಿಸಿ ಆದೇಶಿಸಿದ್ದಾರೆ.
ಛತ್ತರ್‌ಪುರ್‌ನ ಮಹಾರಾಜ ಛತ್ರಸಾಲ ವಿವಿ ಕುಲಪತಿ ಡಾ.ಟಿ.ಆರ್.ತಾಪಕ್, ಗುಲ್ಬರ್ಗಾ ವಿವಿ ಕುಲಪತಿ ಡಾ.ದಾಂನಂದ ಅಗ್ಸರ್ ಮತ್ತು ಆಂಧ್ರ ಪ್ರದೇಶದ ಆದಿವಾಸಿ ವಿವಿ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ.
ಮುಕ್ತ ವಿವಿ ಕುಲಪತಿಯಾಗಿದ್ದ ಪ್ರೊ.ಎಸ್.ವಿದ್ಯಾಶಂಕರ್ ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಯಗಿ ನೇಮಕವಾದ ಬಳಿಕ ಆ ಸ್ಥಾನ ತೆರವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!