ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ನಾನು ಸಹ ಆಟೋಚಾಲಕ ವೃತ್ತಯಿಂದ ರಾಜಕಾರಣಕ್ಕೆ ಬಂದಿದ್ದೇನೆ ನಿಮ್ಮಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು, ತಮ್ಮ ಆಟೋಗಳಲ್ಲಿ ಕನ್ನಡ ಬರಹ, ಕನ್ನಡ ಭಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳಿದರು.
ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು ಆಟೋ ಚಾಲಕರು ಭಾರೀಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ ಸ್ವತಹ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…