ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ
ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು.
ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ರಾತ್ರಿ ಸುರಿದ ಭಾರಿ ಮಳೆಗೆ ಪಟ್ಟಣಕ್ಕೆ ಹೊಂದಿಕೊಂಡಿರುವ ಹಿರಿಕೆರೆಯಲ್ಲಿ ಹೆಚ್ಚಿದ ನೀರು. ಕೋಡಿಯಲ್ಲಿ ಉಕ್ಕಿ ಹರಿದ ನೀರಿನ ಪರಿಣಾಮ ಬಸ್ ನಿಲ್ದಾಣ, ಪೆಟ್ರೋಲ್ ಬಂಕ್ ಜಮೀನುಗಳು ನೀರಿನಿಂದ ಜಲಾವೃತವಾಗಿದೆ.
ಮಳೆ ಆರಂಭವಾದ ಕೂಡಲೇ ಎಚ್ಚೆತ್ತ ಕೆಎಸ್ ಆರ್ ಟಿಸಿ ಸಿಬ್ಬಂದಿ ಡಿಪೋದಲ್ಲಿದ್ದ 60ಕ್ಕೂ ಹೆಚ್ಚು ಬಸ್ ಗಳನ್ನು ಬೀದರ್- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಚಾಲಕರು ವಾಹನಗಳನ್ನು ನಿಲ್ಲಿಸುವಂತಾಗಿದೆ.

ಕೋಡಿ ನೀರು ಸರಾಗವಾಗಿ ಹರಿದು ಹೋಗಲು ಹಲವು ಅಡೆತಡೆ ರಾಜ ಕಾಲುವೆಗಳ ಒತ್ತುವರಿ. ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ಪುರಸಭೆ, ನೀರಾವರಿ ಇಲಾಖೆಯ ಅಧಿಕಾರಿ ವರ್ಗದ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಬಳಿಕ ಶಾಸಕ ಸುರೇಶ್ ಗೌಡ ಸ್ಥಳಕ್ಕೆ ಭೇಟಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೀಫ್ ಇಂಜಿನಿಯರ್ ರವೀಂದ್ರ ರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ ಶಾಸಕ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ತೋರಿಸಿದ ಶಾಸಕ. ರಾಜಕಾಲುವೆಯನ್ನು ರಾಷ್ಟ್ರೀಯ ಹೆದ್ದಾರಿಯವರು ಕಿರಿದು ಮಾಡಿದ ಪರಿಣಾಮ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.



