ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ
ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು ಪತ್ತೇ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದು, ಇದೀಗಾ ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸುವ ಜಾಥವನ್ನು ನಡೆಸಿ ಉರುಳು ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದ ತಾರಕ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿ ಅದರ ಮರಿಗಳು ಅನಾಥವಾಗಿದ್ದವು. ಈ ವೇಳೆ ಅರಣ್ಯ ಇಲಾಖೆಯು ತನ್ನ ಸಿಬ್ಬಂದಿಗಳಿಗೆ ಕಾಡಂಚಿನ ೩ ಕಿಮೀ ವ್ಯಾಪ್ತಿ ಜೊತೆಗೆ ನೀರು ಹರಿಯುವ ಸ್ಥಳದಲ್ಲಿ ಉರುಳು ಪತ್ತೇ ಕಾರ್ಯಚರಣೆ ನಡೆಸುವಂತೆ ಸೂಚಿಸಿತ್ತು. ಜೊತೆಗೆ ಇದೀಗಾ ಅರಣ್ಯ ಇಲಾಖೆಯೂ ಸ್ವಯಂ ಸೇವಕರನ್ನೊಳಗೊಂಡಂತೆ ಕಾಡಂಚಿನ ಗ್ರಾಮಗಳಾದ ದಮ್ಮನಕಟ್ಟೆ, ಹುಣಸೇಕುಪ್ಪೆ, ಸತ್ತಿಗೆಹುಂಡಿ, ತಾರಕ ಹಾಗೂ ಕೊತ್ತನಹಳ್ಳಿ ಗ್ರಾಮಗಳಲ್ಲಿ ‘ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಅವುಗಳನ್ನು ಕೊಲ್ಲುವುದಕ್ಕೆ ಸಹಕರಿಸಬೇಡಿ’ ಎಂಬ ಶೀರ್ಷಿಕೆಯ ಚಿತ್ರಗಳನ್ನು ಹಿಡಿದು ಉರುಳು ಬಗ್ಗೆ ಜಾಗೃತಿ ಜಾಥ ನಡೆಸಿದರು. ಹಾಗೂ ಧ್ವನಿವರ್ಧಕಗಳ ಮೂಲಕ ಉರುಳು ಹಾಕುವುದು ಅಪರಾಧವಾಗಿರುತ್ತದೆ. ಆದ್ದರಿಂದ ಉರುಳು ಹಾಕುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಥವ ಉರುಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಸಹಾಯವಾಣಿ ೧೯೨೬ ಅಥವ ೯೪೮೨೦೧೧೫೪೩ ಗೆ ಕರೆ ಮಾಡುವಂತೆ ಸೂಚಿಸಲಾಯಿತು.
ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಎಸ್.ಎಸ್.ಸಿದ್ದರಾಜು, ಹರ್ಷಿತ್, ಪಿಎಸ್‌ಐ ಜಯಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಮಣ್ಯ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು, ಸ್ವಯಂ ಸೇವಕರು ಹಾಜರಿದ್ದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…