ಜಿಲ್ಲೆಗಳು

ಭಿಕ್ಷುಕರ & ಸಾಲಗಾರರ ರಾಷ್ಟ್ರವನ್ನಾಗಿ ಮಾಡಿದ್ದೇ ಕಾಂಗ್ರೆಸ್ ಆಡಳಿತದ ಸಾಧನೆ : ನಳಿನ್ ಕುಮಾರ್ ಕಟೀಲ್

ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೋಡನೆ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಗತ್ತಿನಲ್ಲಿ ಐದನೇ ರಾಷ್ಟ್ರವಾಗಿ ಹೊರಹೊಮ್ಮಿದೆ. ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಒಂದನೇ ಸ್ಥಾನ ಅಲಂಕರಿಸಿದೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯವನ್ನು ಸಾಲಗಾರರ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಅನಾರೋಗ್ಯದ ನಿಮಿತ್ತ ನನ್ನ ಅನುಮತಿಯನ್ನು ಪಡೆದು ಆಗಮಿಸಿಲ್ಲ ಎಂದು ಸ್ಪಷ್ಟಪಡಿಸಿದರು.

andolanait

Recent Posts

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

48 mins ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

1 hour ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

2 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

2 hours ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

2 hours ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

3 hours ago