ಜಿಲ್ಲೆಗಳು

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಈ ಬಗ್ಗೆ ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ -ಸಿಎಂ ಬೊಮ್ಮಾಯಿ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂಜನಗೋಡಿಗೆ ಭೇಟಿ ನೀಡಿದ್ದು,ಶ್ರೀಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ.


ನವೆಂಬರ್ 29 ರಂದು ನವದೆಹಲಿಗೆ ತೆರಳಲಿದ್ದು, ಹಿರಿಯ ವಕೀಲರಾದ ಶ್ರೀ ಮುಕುಲ್ ರೋಹಟಗಿಯವರನ್ನು ಭೇಟಿಯಾಗಲಿದ್ದು, ಗಡಿವಿಚಾರದ ಬಗ್ಗೆ ಚರ್ಚೆ ಹಾಗೂ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ ಭೇಟಿಯಾಗುವ ಉದ್ದೇಶವಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಮಹಾರಾಷ್ಟ್ರದೊಂದಿಗಿನ ಗಡಿವಿವಾದಕ್ಕೆ ಸಂಬಂಧಪಟ್ಟಂತೆ ಇದೇ 30 ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಮೂರ್ತಿಗಳಾದ ಶಿವರಾಜಪಾಟೀಲ್ ಅವರನ್ನು ನೇಮಿಸಲಾಗಿದ್ದು, ಸಭೆ ಕೂಡ ನಡೆಸಲಾಗಿದೆ. ನವೆಂಬರ್ 30 ರಂದು ಗಡಿ ವಿಚಾರದ ಬಗ್ಗೆ ಕಾನೂನು ಸಮರಕ್ಕೆ ರಾಜ್ಯ ಸಿದ್ಧವಿದ್ದು, ರಾಜ್ಯದ ನಿಲುವು, ಕಾನೂನುಗಳ ಬಗ್ಗೆ ವಾದ ಮಂಡಿಸಲಾಗುವುದು. ಮಹಾರಾಷ್ಟ್ರದ ಗಡಿಭಾಗದ ಗ್ರಾಮದ ಜನರು, ಕರ್ನಾಟಕಕ್ಕೆ ಸೇರುವುದಾಗಿ ಮನವಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಸದ್ಯಕ್ಕೆ ನ್ಯಾಯಾಲಯದಲ್ಲಿರುವುದರಿಂದ ಈ ವಿಷಯದ ಕುರಿತು ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದರು.

ಮಂಡ್ಯ ಹಾಗೂ ಮೈಸೂರಿನಲ್ಲಿ ಭತ್ತ ಖರೀದಿ ಕೇಂದ್ರ :
ಭತ್ತ ಖರೀದಿ ಕೇಂದ್ರವನ್ನು ಮಂಗಳೂರಿನಲ್ಲಿ ಮಾತ್ರ ತೆರೆಯಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಂಗಳೂರಿನಲ್ಲಿ ಕುಚ್ಚಲಕ್ಕಿಯನ್ನು ಜನರು ಬಳಸುವುದರಿಂದ , ಈ ಭಾಗದಲ್ಲಿ ಕುಚ್ಚಲಕ್ಕಿಯ ಖರೀದಿ ಮಾಡಲಾಗುತ್ತಿದೆ.ಭತ್ತವನ್ನು ರಾಜ್ಯದೆಲ್ಲೆಡೆಯಿಂದ ಖರೀದಿಸಲಾಗುವುದು. ಉತ್ತರ ಕರ್ನಾಟಕದಲ್ಲಿ ಗಂಗಾವತಿ, ಸಿಂದನೂರು, ಮಂಡ್ಯ ಹಾಗೂ ಮೈಸೂರುಗಳಲ್ಲಿಯೂ ಖರೀದಿಸಲಾಗುವುದು ಎಂದರು.

ಸಂವಿಧಾನದ ಚೌಕಟ್ಟಿನೊಳಗೆ ಕ್ರಮ :
ಹಿಂದುಳಿದ ವರ್ಗದ ಮೀಸಲಾತಿಗೆ ಸಂಬಂಧಿಸಿದಂತೆ, ಎಲ್ಲ ಸಮುದಾಯಗಳ ಆಕಾಂಕ್ಷೆಗಳು ಹೆಚ್ಚಾಗಿದೆ. ಆದರೆ ಸಂವಿಧಾನದ ಚೌಕಟ್ಟಿನೊಳಗೆ ಎಲ್ಲ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಹಿಂದುಳಿದ ವರ್ಗ ಆಯೋಗವಿದೆ. ಸಮುದಾಯಗಳ ಮೀಸಲಾತಿ ಹೆಚ್ಚಳ ಮನವಿಯನ್ನು ಮೊದಲು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ತನಿಖೆಯ ನಂತರ ವಿಷಯಗಳು ಸ್ಪಷ್ಟವಾಗಲಿವೆ :
ಬೆಂಗಳೂರಿನಲ್ಲಿ ವೆಬ್ ಸೈಟೊಂದರ ಮೂಲಕ ನಕಲಿ ಆಧಾರ್ ಕಾರ್ಡ್, ವೋಟರ್ ಐಡಿಯನ್ನು ಪಡೆಯಬಹುದು, ಮಂಗಳೂರಿನ ಬಾಂಬ್ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಕೂಡ ಇಂತಹದೇ ನಕಲಿ ದಾಖಲೆಗಳನ್ನು ಪಡೆದಿರುವುದುಬೆಳಕಿಗೆ ಬಂದಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಂತಹ ಬಹಳಷ್ಟು ವೆಬ್ಸೈಟ್ಗಳಿವೆ. ಮತ ಪರಿಷ್ಕರಣೆ ಹಾಗೂ ಮತದಾರರಿಗೆ ಸಂಬಂಧಿಸಿದಂತೆ ತನಿಖೆ ಈಗಾಗಲೇ ನಡೆಯುತ್ತಿದ್ದು, ತನಿಖೆಯ ನಂತರ ಈ ಎಲ್ಲ ವಿಷಯಗಳೂ ಸ್ಪಷ್ಟವಾಗಲಿವೆ ಎಂದರು.

ವಿಪಕ್ಷಗಳ ಸಹಕಾರ :
ಗಡಿ ವಿಚಾರಗಳ ಬಗ್ಗೆ ವಿಪಕ್ಷಗಳ ಸಹಕಾರವಿದೆಯೇ ಎಂಬುದಕ್ಕೆ ಉತ್ತರ ನೀಡಿ, ರಾಜ್ಯ ಗಡಿ, ನೆಲ, ಜಲಗಳ ವಿಚಾರದಲ್ಲಿ ವಿಪಕ್ಷಗಳು ಸಹಕಾರ ನೀಡುತ್ತಿವೆ. ಆದರೆ ರಾಜಕಾರಣದಲ್ಲಿ ಅವರವರ ರಾಜಕಾರಣವನ್ನು ಎಲ್ಲ ಪಕ್ಷಗಳೂ ಮಾಡುತ್ತವೆ ಎಂದರು.

ಮೈಸೂರಿನ ಪಾರಂಪರಿಕ ಕಟ್ಟಡಗಳ ದುರಸ್ತಿ ಬಗ್ಗೆ ಚರ್ಚಿಸಿ ತೀರ್ಮಾನ :
ಮೈಸೂರಿನಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಅನುದಾನ ನೀಡಲಾಗಿದೆ. ಆದರೆ ಮೈಸೂರಿನಲ್ಲಿನ ಪಾರಂಪರಿಕ ಕಟ್ಟಡಗಳು ಒಂದೊಂದಾಗಿ ಕುಸಿಯುತ್ತಿರುವ ಬಗ್ಗೆ ಉತ್ತರಿಸಿ, ಈ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದು, ಕಟ್ಟಡಗಳ ದುರಸ್ತಿಗಾಗಿ ಹಣಕಾಸಿನ ವ್ಯವಸ್ಥೆಗಳ ಬಗ್ಗೆ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಏಕರೂಪ ನಾಗರಿಕ ಸಂಹಿತೆ :
ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭಾಜಪ ಪಕ್ಷ 30 ವರ್ಷಗಳಿಂದಲೂ ಹೇಳುತ್ತಿದೆ. ಕೆಲವು ರಾಜ್ಯಗಳಲ್ಲಿ ಈ ಸಂಹಿತೆಯನ್ನು ಜಾರಿಗೆ ತರಲು ಸಮಿತಿಗಳನ್ನು ರಚಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಈ ಬಗೆಗಿನ ಬೆಳವಣಿಗೆ, ಸಂವಿಧಾನದಲ್ಲಿನ ಅವಕಾಶಗಳ ಸಂಪೂರ್ಣ ಮಾಹಿತಿಯನ್ನು ಪಡೆದು, ನಂತರ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಾಸಕ ಹರ್ಷವರ್ಧನ್,ಸಂಸದ ಶ್ರೀ ನಿವಾಸ ಪ್ರಸಾದ್, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago