ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ.
ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ ಮನೆಯಿಂದ ಹೊರ ಹೋದವರು ಮತ್ತೆ ಬರಲಿಲ್ಲ. ರಾತ್ರಿ ಮನೆ ಸಮೀಪದ ಕಾರ್ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ
ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ,ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೋಯ್ದಲಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ
ಕಳೆದ ಒಂದು ತಿಂಗಳ ಹಿಂದೆ ಬೆಳ್ಳಂಬೆಳಗ್ಗೆ ಕೊರಿಯರ್ ಪಾರ್ಸೆಲ್ ಕೊಡುವ ನೆಪದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮೃತ ಶಂಭುಲಿಂಗ ಅವರ ಪತ್ನಿ ದಾಕ್ಷಾಯಿಣಿ ಅವರ ಕೈ ಕಾಲು ಕಟ್ಟಿ ನಗನಾಣ್ಯ ದೋಚಿ ಪರಾರಿಯಾಗಿದ್ದ ಘಟನೆಯನ್ನು ಇಲ್ಲಿ ಸ್ಮರಿಸಬಹುದು. ಮೃತ ಶಿಕ್ಷಕ ಕೋಟ್ಯಂತರ ರೂಪಾಯಿ ಚೀಟಿ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದ ಕಾರಣ ಈ ದರೋಡೆ ಪ್ರಕರಣವೂ ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿತ್ತು
ಇದೀಗ ಶಿಕ್ಷಕ ಶಂಭುಲಿಂಗು ಸ್ಥಿತಿವಂತರಾಗಿದ್ದರೂ ಆತ್ಮಹತ್ಯೆಗೆ ಶರಣಾಗಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ನಂಜನಗೂಡು ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…