ಜಿಲ್ಲೆಗಳು

ನಂಜನಗೂಡು : ಸಾಲಕ್ಕೆ ಹೆದರಿ ಶಿಕ್ಷಕ ಸಾವಿಗೆ ಶರಣು

ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ.

ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ ಮನೆಯಿಂದ ಹೊರ ಹೋದವರು ಮತ್ತೆ ಬರಲಿಲ್ಲ. ರಾತ್ರಿ ಮನೆ ಸಮೀಪದ ಕಾರ್ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ  ಶರಣಾಗಿದ್ದಾರೆ

ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ,ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೋಯ್ದಲಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ

ಕಳೆದ ಒಂದು ತಿಂಗಳ ಹಿಂದೆ ಬೆಳ್ಳಂಬೆಳಗ್ಗೆ ಕೊರಿಯರ್ ಪಾರ್ಸೆಲ್ ಕೊಡುವ ನೆಪದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮೃತ ಶಂಭುಲಿಂಗ ಅವರ ಪತ್ನಿ ದಾಕ್ಷಾಯಿಣಿ ಅವರ ಕೈ ಕಾಲು ಕಟ್ಟಿ ನಗನಾಣ್ಯ ದೋಚಿ ಪರಾರಿಯಾಗಿದ್ದ ಘಟನೆಯನ್ನು ಇಲ್ಲಿ ಸ್ಮರಿಸಬಹುದು. ಮೃತ ಶಿಕ್ಷಕ ಕೋಟ್ಯಂತರ ರೂಪಾಯಿ ಚೀಟಿ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದ ಕಾರಣ ಈ ದರೋಡೆ ಪ್ರಕರಣವೂ ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿತ್ತು

ಇದೀಗ ಶಿಕ್ಷಕ ಶಂಭುಲಿಂಗು ಸ್ಥಿತಿವಂತರಾಗಿದ್ದರೂ ಆತ್ಮಹತ್ಯೆಗೆ ಶರಣಾಗಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ನಂಜನಗೂಡು ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago