ಮಂಡ್ಯ: ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ.
ಪಾಂಡಿಚೇರಿ ಮೂಲ ನಿವಾಸಿ, ಸೈಕ್ಲಿಂಗ್ ಕ್ರೀಡಾಪುಟು ಆಲ್‌ಹರ್ಶ್ (೧೭) ಮೃತ ವ್ಯಕ್ತಿ.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ ಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ರಾಜ್ಯ, ಹೊರ ರಾಜ್ಯದಿಂದ ಸೈಕ್ಲಿಂಗ್ ಕ್ರೀಡಾಪಟುಗಳು ಆಗಮಿಸಿದ್ದರು ಎನ್ನಲಾಗಿದೆ. ಕ್ರೀಡಾಕೂಟದ ಅಣತಿ ದೂರದ ನಾಲೆ ಬಳಿ ಈಜಲು ಹೋಗಿದ್ದ ವೇಳೆ ಆಲ್ ಹರ್ಶ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿ ನಾಲೆಯಿಂದ ಕ್ರೀಡಾಪಟು ಆಲ್ ಹರ್ಶ್ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…
ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…
ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…
ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…
ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…