ಹನೂರು : ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೆ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ದೊರೆತಿದೆ.

ನವ ದೆಹಲಿಯಲ್ಲಿ ಡಿಸೆಂಬರ್ 11 ರಂದು ನಡೆದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38 ನೇ ವಾರ್ಷಿಕ ಸಮಾರಂಭದಲ್ಲಿ ರಾಷ್ಟ್ರೀಯ ಅಧ್ಯಕ್ಷ ಸುಮನಾಸ್ಕರ್ ಹಾಗೂ ಸಂಘಟನಾ ಕಾರ್ಯದರ್ಶಿ ಚೆಲುವರಾಜ್ ಅವರು ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಸನ್ಮಾನಿಸಿದರು.
ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿರುವ ಗಣ್ಯರನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯದಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 50 ಕ್ಕೂ ಹೆಚ್ಚು ಸಾಧಕರು ಪಾಲ್ಗೊಂಡಿದ್ದರು.
ಚಾಮರಾಜನಗರ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೂ ಸಹ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.





