ಮೈಸೂರು : ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ ವ್ಯವಸ್ಥಾಪಕ ನಿರ್ದೇಶಕರಾದ ರಚನಾ ಮಹೇಶ್ ಅವರು ಅಂದು ಬೆಳಿಗ್ಗೆ ೯.೩೦ ರಿಂದ ೬.೩೦ರವರೆಗೆ ಕಾರ್ಯಕ್ರಮ ನಡೆಲಿದೆ. ಇದು ಮಹಿಳೆಯರಿಗಾಗಿ ನಡೆಸುತ್ತಿರುವ ಉದ್ಯೋಗ ಮೇಳವಾಗಿದೆ. ಈಗಾಗಲೇ ೩೦ ಕಂಪನಿಗಳು ಬರುವುದಾಗಿ ನೋಂದಾವಣಿಯಾಗಿವೆ ಎಂದು ತಿಳಿಸಿದ್ದಾರೆ.
ಯಾರೆಲ್ಲಾ ಮಹಿಳೆಯರು ಭಾಗವಹಿಸಬಹುದು ?
೧೮ರಿಂದ ೪೫ ವರ್ಷದ ಮಹಿಳೆಯರು ಮೇಳದಲ್ಲಿ ಉದ್ಯೋಗ ಹುಡುಕಬಹುದು. ಎಸ್‌ಎಸ್‌ಎಲ್‌ಸಿಯಿಂದ ಹಿಡಿದು ಯಾವುದೇ ಪದವಿ, ಡಿಪ್ಲೋಮಾ ಪಡೆದವರು ಅರ್ಹರಿದ್ದಾರೆ. ಇನ್ನು ಮಾರಾಟ ಪ್ರದರ್ಶನದಲ್ಲಿ ಮಹಿಳೆಯರೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಬಹುದು. ಹೀಗೆ ಮಾರಾಟ ಮಾಡುವ ಮಹಿಳೆಯರು ತಮ್ಮ ಸಂಸ್ಥೆಯ ಬ್ಯಾನರ್ ಅನ್ನು ಒಳಗೊಂಡಿರಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: ೬೩೬೪೩೪೦೦೨೭, ೭೨೦೪೮೦೯೦೮೫, ೮೬೬೦೨೩೯೬೯೯ ಸಂಪರ್ಕಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ.ಸೋಮಣ್ಣ, ಡಾ.ನಿರಂಜನಬಾಬು, ಪ್ರತಿಭಾ ಗುರುರಾಜ್, ಶೋಭಾ, ನಂದಿನಿ ಇತರರು ಇದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…