ಮೈಸೂರು: ಬರುವ ನವೆಂಬರ್ ತಿಂಗಳ 10ರಂದು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳ್ಳಲಿದ್ದು ಎಂದು ಶಾಸಕ ಎಲ್.ನಾಗೇಂದ್ರ ಅವರು ತಿಳಿಸಿದ್ದಾರೆ.
ನಗರದ ಬೋಗಾದಿಯ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ೧೦೮ ಅಡಿಯ ಬೃಹತ್ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಡಾ.ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಮೆ ಅನಾವರಣದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೆ.ಹರೀಶ್‌ಗೌಡ ಮಾತನಾಡಿದರು. ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ಉಪಾಧ್ಯಕ್ಷ ರವಿ ರಾಜಕೀುಂ, ಕವೀಶ್‌ಗೌಡ, ಪಾಲಿಕೆ ಸದಸ್ಯರಾದ ಪ್ರೇಮಾ ಶಂಕರೇಗೌಡ, ಪುಷ್ಪಲತಾ ಜಗನ್ನಾಥ್, ಅಶ್ವಿನಿ ಅನಂತು, ಪೈ.ಶ್ರೀನಿವಾಸ್, ಶಿವಣ್ಣ ಮತ್ತಿತರರು ಹಾಜರಿದ್ದರು.





