ಮೈಸೂರು: ಮೈಸೂರಿನ ಕಲಾ ಪ್ರಪಂಚ ಅಜ್ಜನ ಮನೆ ಸಂಸ್ಥೆವತಿಯಿಂದ ನ.೬ರಂದು ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಸೂರ್ಯೋದಯದಿಂದ ಚಂದ್ರೋದಯದವರೆಗೆ ಶೀರ್ಷಿಕೆಯಡಿ ಕಾರ್ತಿಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಕೃಷ್ಣ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ೧೨ ಗಂಟೆಗಳ ಅವಧಿಯಲ್ಲಿ ಮೈಸೂರಿನ ವಿವಿಧ ಕಲಾ ಶಾಲೆಯ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಜೊತೆಗೆ ವಿಶೇಷ ಚೇತನ ಮಕ್ಕಳು ಮೂರು ಗಂಟೆಗಳ ಕಾಲ ಕಾರ್ಯಕ್ರಮ ನೀಡಲಿದ್ದಾರೆ ಎಂದು ಅವರು ಹೇಳಿದರು.
ವಿದ್ವಾನ್ ಕೃಷ್ಣಮೂರ್ತಿ ಶಿಷ್ಯರಿಂದ ಮಂಗಳ ವಾದ್ಯ, ಡಾ.ಶ್ರೀಶಾ ಭಟ್ ಶಿಷ್ಯರಿಂದ ಚಂಡೆವಾದನ, ಡಾ.ಕೃಪಾಫಡ್ಕೆ ಶಿಷ್ಯರಿಂದ ಭರತನಾಟ್ಯ, ಅಮ್ಮ ರಾಮಚಂದ್ರ ಅವರ ನೇತೃತ್ವದಲ್ಲಿ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಜಾನಪದ ಹಾಡುಗಳು, ಕವಿತಾ ಧನಂಜಯ ಅವರ ಶಿಷ್ಯರಿಂದ ನಾಟಕ, ಗಾನಭಾರತೀ ಕಲಾ ಶಾಲೆಯ ಮಕ್ಕಳಿಂದ ವಾದ್ಯವೃಂದ, ಸಂಧ್ಯಾಭಟ್ ಶಿಷ್ಯರಿಂದ ಹಿಂದೂಸ್ತಾನಿ ಸಂಗೀತ, ನಾಗಶ್ರೀ ಫಣಿ ಶಿಷ್ಯರಿಂದ ಜಾನಪದ ನೃತ್ಯ, ವಿದ್ವಾನ್ ವಿ.ಎಸ್.ರಮೇಶ್ ಶಿಷ್ಯರಿಂದ ತಾಳವಾದ್ಯ ಕಾರ್ಯಕ್ರಮ ಪ್ರದರ್ಶನಗೊಳ್ಳಲಿವೆ. ರಂಗರಾವ್ ಸ್ಮಾರಕ ವಿಶೇಷ ಚೇತನ ಶಾಲಾ ವಿದ್ಯಾರ್ಥಿಗಳಿಂದ ಹಾಡು ಮತ್ತು ನೃತ್ಯ, ಮೈತ್ರಿ ಬುದ್ದಿ ಮಾಂದ್ಯ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ, ಇನ್ಸ್ಟಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್ ಶಾಲಾ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನವಿದೆ ಎಂದು ಅವರು ಮಾಹಿತಿ ನೀಡಿದರು. ಸಂಸ್ಥೆಯ ಸುಮ ಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…
ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು…
ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಓ…
ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ…
ಬೆಂಗಳೂರು: ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್-1 ಚಿತ್ರದ ದೈವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ…
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.…