ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ನಜ್ಮಾ ನಜೀರ್ ಅಹಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷ ಎಸ್.ಎಲ್.ರಂಗಸ್ವಾಮಿ ಅವರ ಮೂರು ವರ್ಷಗಳ ಸೇವಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ನಜೀರ್ ಅಹಮದ್ ಅವರನ್ನು ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮಾಡಿ ಅನುಮೋದಿಸಿದರು. ಉಳಿದಂತೆ ಉಪಾಧ್ಯಕ್ಷರಾಗಿ ನರಸಿಂಹರಾಜೇ ಅರಸ್, ವಸಂತಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಶ್ರೀಕಂಠೇಗೌಡ, ಜಂಟಿ ಕಾರ್ಯದರ್ಶಿಯಾಗಿ ಎನ್.ಶಿವಲಿಂಗಪ್ಪ, ಖಜಾಂಚಿಯಾಗಿ ಸಿ.ಕಾಳೇಗೌಡ, ಆಂತರಿಕ ಲೆಕ್ಕ ಪರಿಶೋಧಕರಾಗಿ ಎ.ಎಲ್.ನಂಜಪ್ಪ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಎಲ್.ಬಿ.ಜವರೇಗೌಡ, ಸಂಘಟನಾ ಕಾರ್ಯದರ್ಶಿಯಾಗಿ ಕೆ.ಎನ್.ಬೊಮ್ಮೇಗೌಡ ಅವರು ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿ ಸಮಿತಿ ನಿರ್ದೇಶಕರಾಗಿ ಟಿ.ಪ್ರಕಾಶ್, ಎಸ್.ಟಿ.ಯೋಗೇಂದ್ರ, ಎಂ.ಸ್ವಾಮೀಗೌಡ, ಸಿ.ಎಚ್.ಮಂಜುನಾಥ್, ರಾಮಚಂದ್ರು, ಪರಶಿವಮೂರ್ತಿ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ನಜೀರ್ ಅಹಮದ್ ಮಾತನಾಡಿ, ನನ್ನನ್ನು ಸಂಘದ ಸದಸ್ಯರು ಒಮ್ಮತದಿಂದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಎಲ್ಲರಿಗೂ ಅಭಿನಂದನೆಗಳು. ನನ್ನ ಅವಧಿಯಲ್ಲಿ ತಾಲ್ಲೂಕು ಸಂಘದಲ್ಲಿರುವ 1221 ನಿವೃತ್ತ ನೌಕರರ ಹಿತಕಾಯುವುದೇ ನನ್ನ ಪ್ರಮುಖ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…