ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂಬರುವ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಈವರೆಗೂ ತಟಸ್ಥವಾಗಿಯೇ ಇದ್ದೀನಿ. ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಬೆಂಬಲದ ಬಗ್ಗೆ ಮಾತನಾಡಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುವುದು ಪುತ್ರ ಅಭಿಷೇಕ್‌ಗೆ ಬಿಟ್ಟದ್ದು ಎಂದು ಹೇಳಿದರು.
ವಿಜಯನಗರದ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ಬಳಿಯ ರಿಂಗ್‌ರೋಡ್‌ಗೆ ಸಂಪರ್ಕಿಸುವ ನಡುವಿನ ೩.೫ ಕಿ.ಮೀ ರಸ್ತೆಗೆ ಅಂಬರೀಶ್ ಹೆಸರು ನಾಮಕರಣಮಾಡಿದ್ದು ಸಂತಸದ ಕ್ಷಣವಾಗಿದೆ. ಅಂಬರೀಶ್‌ಗೆ ಮೈಸೂರು ಇಷ್ಟವಾದ ಸ್ಥಳ. ಅಂಬರೀಶ್ ಕುಟುಂಬದವರೂ ಇಲ್ಲಿಯೇ ಇದ್ದಾರೆ. ಅಭಿಮಾನಿಗಳ ಬೇಡಿಕೆಯಿಂದ ಈ ರಸ್ತೆಗೆ ಹೆಸರು ಇಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನಟ ಅಭಿಷೇಕ್ ಅಂಬರೀಶ್ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಮದ್ದೂರು ಕ್ಷೇತ್ರದಲ್ಲಿ ನನ್ನ ಹೆಸರು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದರು.
ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಇತರರು ಹಾಜರಿದ್ದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…