ಜಿಲ್ಲೆಗಳು

ಚುನಾವಣೆಯಲ್ಲಿ ತಟಸ್ಥ ನಿಲುವು : ಸುಮಲತಾ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂಬರುವ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಈವರೆಗೂ ತಟಸ್ಥವಾಗಿಯೇ ಇದ್ದೀನಿ. ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಬೆಂಬಲದ ಬಗ್ಗೆ ಮಾತನಾಡಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುವುದು ಪುತ್ರ ಅಭಿಷೇಕ್‌ಗೆ ಬಿಟ್ಟದ್ದು ಎಂದು ಹೇಳಿದರು.
ವಿಜಯನಗರದ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ಬಳಿಯ ರಿಂಗ್‌ರೋಡ್‌ಗೆ ಸಂಪರ್ಕಿಸುವ ನಡುವಿನ ೩.೫ ಕಿ.ಮೀ ರಸ್ತೆಗೆ ಅಂಬರೀಶ್ ಹೆಸರು ನಾಮಕರಣಮಾಡಿದ್ದು ಸಂತಸದ ಕ್ಷಣವಾಗಿದೆ. ಅಂಬರೀಶ್‌ಗೆ ಮೈಸೂರು ಇಷ್ಟವಾದ ಸ್ಥಳ. ಅಂಬರೀಶ್ ಕುಟುಂಬದವರೂ ಇಲ್ಲಿಯೇ ಇದ್ದಾರೆ. ಅಭಿಮಾನಿಗಳ ಬೇಡಿಕೆಯಿಂದ ಈ ರಸ್ತೆಗೆ ಹೆಸರು ಇಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನಟ ಅಭಿಷೇಕ್ ಅಂಬರೀಶ್ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಮದ್ದೂರು ಕ್ಷೇತ್ರದಲ್ಲಿ ನನ್ನ ಹೆಸರು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದರು.
ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಇತರರು ಹಾಜರಿದ್ದರು.

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago