ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ.
ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು. ಕಾರಂಜಿ ಕೆರೆ ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರ ವಾಡುತ್ತಿದೆ. ನಗರದ ಎಂ.ಜಿ.ರಸ್ತೆಯಲ್ಲಿ ಮುಖ್ಯ ದ್ವಾರವಿದೆ. ಪ್ರತಿದಿನ ಸಾವಿರಾರು ಮಂದಿ ಕಾರಂಜಿ ಕೆರೆಗೆ ಭೇಟಿ ನೀಡುತ್ತಾರೆ. ದೋಣಿ ವಿಹಾರ ಇರುವ ಕಾರಣ ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ಹೆಚ್ಚು ಆಕರ್ಷಣೀಯವಾಗಿದೆ. ಆದರೆ, ಮುಖ್ಯ ದ್ವಾರದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಮತ್ತೊಂದು ದ್ವಾರದ ಮೂಲಕ ಪ್ರವೇಶ ನೀಡಲು ಚಿಂತನೆ ನಡೆಸಲಾಗಿತ್ತು.
ನಗರದ ಮೈಸೂರು-ತಿ.ನರಸೀಪುರ ಮುಖ್ಯರಸ್ತೆುಂಲ್ಲಿನ ನಂದಿನ ಹಾಲಿನ ಕೇಂದ್ರದ ಎದುರಿರುವ ಪ್ರಾದೇಶಿಕ ಪ್ರಾಕೃತಿಕ ವಿಜ್ಞಾನ ಸಂಗ್ರಹಾಲುಂದ ಕಚೇರಿ ಆವರಣಕ್ಕೆ ಹೊಂದಿಕೊಂಡಂತೆ ನೂತನವಾಗಿ ಪ್ರವೇಶ ದ್ವಾರವನ್ನು ಆರಂಭಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಮೃಗಾಲುಂ ಪ್ರಾಧಿಕಾರದ ಅಧ್ಯಕ್ಷ ಶಿವಕುವಾರ್ ಅವರು ನೂತನ ಪ್ರವೇಶ ದ್ವಾರವನ್ನು ಉದ್ಘಾಟಿಸಿದರು. ಕರ್ನಾಟಕ ಮೃಗಾಲುಂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಜ್ಯೋತಿ ರೇಚಣ್ಣ, ಗೋಕುಲ್ ಗೋವರ್ಧನ್, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಹಾಜರಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…